Latest

ಮಾಜಿ ಸಿಎಂ ವಿರುದ್ಧ ಅಶ್ಲೀಲ ಪೋಸ್ಟ್ ಮಾಡಿದ್ದ ಯುವಕನ ಬಂಧನ

ಪ್ರಗತಿವಾಹಿನಿ ಸುದ್ದಿ; ಬಾದಾಮಿ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಫೇಸ್​ಬುಕ್​ನಲ್ಲಿ ಅಶ್ಲೀಲ ಪೋಸ್ಟ್​ ಮಾಡಿದ್ದ ಬಾದಾಮಿಯ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 2016ರಲ್ಲಿ ತರೀಕೆರೆ ತಾಲೂಕು ಪಂಚಾಯ್ತಿ ಸದಸ್ಯೆ ಗಿರಿಜಾ ಎಂಬುವವರು ವೇದಿಕೆಯಲ್ಲೇ ಸಿದ್ದರಾಮಯ್ಯನವರ ಕೆನ್ನೆಗೆ ಅಭಿಮಾನದಿಂದ ಮುತಿಟ್ಟಿದ್ದರು.ಈ ಫೋಟೋ ಮತ್ತು ವಿಡಿಯೋ ಸಾಕಷ್ಟು ವೈರಲ್ ಆಗಿದ್ದವು.

ಹಲವು ವರ್ಷಗಳ ಹಿಂದಿನ ಈ ಫೋಟೋವನ್ನು ಫೇಸ್​ಬುಕ್​ನಲ್ಲಿ ಪೋಸ್ಟ್​ ಮಾಡಿದ್ದ ಬಾದಾಮಿಯ ಯುವಕನೊಬ್ಬ ಭಾರತದಲ್ಲಿ ಏಡ್ಸ್​ ಬಂದಿದ್ದು ಇವರಿಂದಲೇ ಎಂದು ಅಸಂಬದ್ಧವಾಗಿ ಪೋಸ್ಟ್​ ಮಾಡಿದ್ದ. ಅಶ್ಲೀಲ ಬರಹ ಬರೆದು ಫೋಟೋ ಪೋಸ್ಟ್ ಮಾಡಿದ್ದ ಯುವಕನನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಬಾದಾಮಿಯ ಖ್ಯಾಡ ಗ್ರಾಮದ ಸಂಗಪ್ಪ ಸಿದ್ರಾಮಣ್ಣವರ ಎಂಬಾತ ಫೇಸ್​ಬುಕ್​ನಲ್ಲಿ ಅಶ್ಲೀಲವಾಗಿ ಪೋಸ್ಟ್​ ಮಾಡಿರುವ ವ್ಯಕ್ತಿ. ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button