Kannada NewsKarnataka NewsLatest

ಭಜಂತ್ರಿ ಸಮಾಜಕ್ಕೆ ಧೈರ್ಯ ತುಂಬಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಲಾಕ್ ಡೌನ್ ಪರಿಸ್ಥಿತಿಯಿಂದಾಗಿ  ತೀವ್ರ ಸಮಸ್ಯೆ ಎದುರಿಸುತ್ತಿರುವ ಭಜಂತ್ರಿ ಸಮಾಜದವರು ಇಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಭೇಟಿ ಮಾಡಿ ತಮಗೂ ಸರಕಾರದಿಂದ ಪರಿಹಾರ ಒದಗಿಸುವಂತೆ ವಿನಂತಿಸಿದರು.
  ಭಜಂತ್ರಿ ಸಮಾಜದವ ಜೀವನ ವರ ಕುಲಕಸುಬಾದ ಬ್ರಾಸ್ ಬ್ರ್ಯಾಂಡ್ ಮೇಲೆ ಅವಲಂಬಿತವಾಗಿದೆ. ಲಾಕ್ ಡೌನ್ ಪರಿಸ್ಥಿತಿಯು ಅವರ ಜೀವನವನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಿದೆ. ಲಾಕ್ ಡೌನ್ ನಿಂದಾಗಿ ಯಾವುದೇ ಸಭೆ, ಸಮಾರಂಭಗಳು ನಡೆಯದೇ ಇರುವುದರಿಂದ ಇವರಿಗೆ ಆರ್ಥಿಕವಾಗಿ ತೀವ್ರ ಹಿನ್ನಡೆಯಾಗಿದೆ. ಅವರ ಸಮಸ್ಯೆಗಳನ್ನು ಸಹಾನುಭೂತಿಯಿಂದ ಆಲಿಸಿದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ಅವರ ಕಷ್ಟಗಳಿಗೆ ಸ್ಪಂದಿಸಿ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಧೈರ್ಯವನ್ನು ತುಂಬಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button