Kannada NewsKarnataka NewsLatest

ಕೃಷ್ಣಾ ನದಿ ಬ್ಯಾರೇಜ್ ಕಾಮಗಾರಿ ಪರಿಶೀಲಿಸಿದ ಪ್ರಕಾಶ ಹುಕ್ಕೇರಿ, ಗಣೇಶ ಹುಕ್ಕೇರಿ

ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ – ಮಾಂಜರಿ -ಅಂಕಲಿ ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ 5.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಬ್ಯಾರೇಜ್ ಕಾಮಗಾರಿಯನ್ನು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಪರಿಶೀಲಿಸಿದರು.

ಕಾಮಗಾರಿ ಮುಕ್ತಾಯದ ಹಂತಕ್ಕೆ ಬಂದಿದ್ದು, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು. ಇದೇ ವೇಳೆ ಸ್ಥಳೀಯರೊಂದಿಗೆ ಚರ್ಚಿಸಿದ ಪ್ರಕಾಶ ಹುಕ್ಕೇರಿ ಮತ್ತು ಗಣೇಶ ಹುಕ್ಕೇರಿ ಜನರ ಸಲಹೆಯ ಮೇರೆಗೆ ಇನ್ನಿತರ ಸಣ್ಣ ಪುಟ್ಟ ಕಾಮಗಾರಿಗಳನ್ನೂ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು.

Home add -Advt

ಇದೇ ಸಂದರ್ಭದಲ್ಲಿ, ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿರುವ 1.40 ಕೋಟಿ ರೂ. ವೆಚ್ಚದ ಹಳೆಯ ಸೇತುವೆ ದುರಸ್ತಿ ಹಾಗೂ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಸಹ ಪರಿಶೀಲಿಸಿ, ಶೀಘ್ರವಾಗಿ ಕೆಲಸ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.

ಈ ಎರಡೂ ಕಾಮಗಾರಿಗಳನ್ನು ಜೂನ್ ಅಂತ್ಯದೊಳಗೆ ಪೂರ್ಣಗೊಳಿಸಿ, ಜನರಿಗೆ ಕುಡಿಯುವ ನೀರು ಮತ್ತು ರೈತರಿಗೆ ಜಮೀನಿಗೆ ನೀರಾವರಿಗೆ ಅನುಕೂಲ ಮಾಡಿಕೊಡಲು ನಿರ್ಧರಿಸಲಾಯಿತು.

Related Articles

Back to top button