ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 75 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 2,493ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಧ್ಯಾಹ್ನದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಕಳೆದ 12 ಗಂಟೆಯಲ್ಲಿ 75 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 28 ಜನ ಸೋಂಕಿನಿಂದ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಉಡುಪಿಯಲ್ಲಿ 27, ಹಾಸನದಲ್ಲಿ 13, ಬೆಂಗಳೂರು ನಗರ 7, ಯಾದಗಿರಿ 7,ದಕ್ಷಿಣ ಕನ್ನಡ 6, ಚಿತ್ರದುರ್ಗ 6, ಕಲಬುರಗಿ 3, ಚಿಕ್ಕಮಗಳೂರು 2, ವಿಜಯಪುರ 2 ಕೇಸ್ ಪತ್ತೆಯಾಗಿದೆ. ಇಂದು ಬೆಳಕಿಗೆ ಬಂದ 75 ಪ್ರಕರಣಗಳಲ್ಲಿ ಮಹಾರಾಷ್ಟ್ರದಿಂದ ಬಂದ ವಲಸಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ಧಾರೆ.
ಈವರೆಗೆ 809 ಜನರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸೋಂಕಿಗೆ 47 ಜನ ಬಲಿಯಾಗಿದ್ದಾರೆ. ಒಟ್ಟಾರೆ 1,635 ಸಕ್ರಿಯ ಸೋಂಕು ಪ್ರಕರಣಗಳು ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ