ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಪಾದರಾಯನಪುರ ಕಾರ್ಪೊರೇಟರ್ ಇರ್ಮಾನ್ ಪಾಷಾ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 (ಸರ್ಕಾರಿ ಅಧಿಕಾರಿಗಳ ಕೆಲಸಕ್ಕೆ ಅಡ್ಡಿ), 270 (ವೈರಸ್ ಹಬ್ಬಿಸಲು ಯತ್ನ), 271 (ರೋಗ ನಿರೋಧಕ ನಿರ್ಬಂಧ ನಿಯಮವನ್ನು ಉಲ್ಲಂಘಿಸುವುದು) ಹಾಗೂ ಕ್ವಾರಂಟೈನ್ ನಿಯಮ ಉಲ್ಲಂಘನೆ ಆರೋಪದಡಿ ಎಫ್ ಐಆರ್ ದಾಖಲಾಗಿದೆ.
ಕೊರೊನಾ ಪಾಸಿಟಿವ್ ಬಂದರೂ ಇಮ್ರಾನ್ ಪಾಷಾ ಆಸ್ಪತ್ರೆಗೆ ದಾಖಲಾಗದೇ ಮನೆಯಲ್ಲಿಯೇ ಇದ್ದರು. ಈ ಹಿನ್ನೆಲೆ ನಿನ್ನೆ ಇಮ್ರಾನ್ ಪಾಷಾ ಅವರನ್ನು ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಪಾದರಾಯನಪುರಕ್ಕೆ ಬಂದಿದ್ದಾಗ ಮನೆ ಬಳಿ ಹೈಡ್ರಾಮಾ ಸೃಷ್ಟಿಸಿ ನೂರಾರು ಜನ ಸೇರುವಂತೆ ಮಾಡಿದ್ದರು. ಈ ಸಂಬಂಧ ಆರೋಗ್ಯ ಅಧಿಕಾರಿಗಳು ಜೆಜೆ ನಗರ ಪೊಲೀಸರಿಗೆ ದೂರು ನೀಡಿದ್ದರು.
ಆರೋಗ್ಯ ಅಧಿಕಾರಿಗಳ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಮ್ರಾನ್ ಪಾಷಾ 200ಕ್ಕೂ ಹೆಚ್ಚು ಜನರ ಜೊತೆ ಸಂಪರ್ಕದಲ್ಲಿದ್ದು, ಎಲ್ಲರನ್ನೂ ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗುತ್ತಿದೆ. ಕಾರ್ಪೊರೇಟರ್ ನಡುವಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ