Latest

ಬಂಡಾಯದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ ಎಂದ ಸಿಎಂ ಬಿ ಎಸ್ ವೈ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ನಾಯಕರ ಬಂಡಾಯದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಸಿಎಂ ಬಿ ಎಸ್ ಯಡಿಯೂರಪ್ಪ, ರಾಜ್ಯದ ಅಭಿವೃದ್ಧಿ ಹಾಗೂ ಕೊರೊನಾ ನಿಯಂತ್ರಣದ ಬಗ್ಗೆ ಮಾತ್ರ ಗಮನ ಹರಿಸುವುದಾಗಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಶಾಸಕರ ಬಂಡಾಯದ ಬಗ್ಗೆ ಯಾವುದೇ ಪ್ರತಿಕ್ರಿಯೆಯನೂ ನೀಡಲ್ಲ, ಈ ಬಗ್ಗೆ ತಲೆ ಕೆಡಿಸಿಕೊಳ್ಳುವುದೂ ಇಲ್ಲ ಎಂದಿದ್ದಾರೆ.

Home add -Advt

ಸಚಿವ ಸ್ಥಾನ ಹಾಗೂ ರಾಜ್ಯ ಸಭಾ ಸ್ಥಾನ ಹಾಗೂ ಕ್ಷೇತ್ರದ ಅನುದಾನದ ವಿಚಾರವಾಗಿ ಬಿಜೆಪಿಯಲ್ಲಿ ಬಂಡಾಯ ತೀವ್ರಗೊಂಡಿದೆ. ಉತ್ತರ ಕರ್ನಾಟಕ ಭಾಗದ ಶಾಸಕರಾದ ಉಮೇಶ್ ಕತ್ತಿ, ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದಲ್ಲಿ ಅತೃಪ್ತರು ಪ್ರತ್ಯೇಕ ಸಭೆಗಳನ್ನು ನಡೆಸಿ, ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

Related Articles

Back to top button