Latest

ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಅಪ್ರಾಪ್ತ ಬಾಲಿಕಿಯೊಬ್ಬಳು ಮಗುವಿಗೆ ಜನ್ಮ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ನಡೆದಿದೆ.

ಮೇ 30ರಂದು ಬಾಲಕಿ ಸಿಂದಗಿ ತಾಲುಕೂ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ಅಪ್ರಾಪ್ತೆ ತಾಯಿ ಈ ಬಗ್ಗೆ ಸಿಂದಗಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Home add -Advt

ಬಾಲಕಿಯ ತಾಯಿ ಬೆಂಗಳೂರಿನಲ್ಲಿ ತನ್ನ ಮೂರು ಮಕ್ಕಳೊಂದಿಗೆ ವಾಸವಾಗಿದ್ದ. ತಾಯಿ ಮನೆಯಲ್ಲಿ ಇಲ್ಲದ ವೇಳೆ ಮನೆಗೆ ಬರುತ್ತಿದ್ದ ಕಾಮುಕ ವ್ಯಕ್ತಿ ಬಾಲಕಿಯ ಜೊತೆ ಸಲುಗೆ ಬೆಳೆಸಿಕೊಂಡಿದ್ದಾನೆ. ಆರೋಪಿ ಸಹ ಸಿಂದಗಿ ಮೂಲದವನಾಗಿದ್ದರಿಂದ ಬಾಲಕಿ ಆತನೊಂದಿಗೆ ಒಡನಾಟ ನಡೆಸಿದ್ದಾಳೆ. ಆತ ಮದುವೆಯಾಗೋದಾಗಿ ನಂಬಿಸಿ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ.

ಲಾಕ್‍ಡೌನ್ ಹಿನ್ನೆಲೆಯಲ್ಲಿ ಅಪ್ರಾಪ್ತೆ ತಾಯಿ ಮಕ್ಕಳೊಂದಿಗೆ ಸ್ವಗ್ರಾಮಕ್ಕೆ ಆಗಮಿಸಿದ್ದಳು. ಮೇ 30ರಂದು ಬಾಲಕಿಗೆ ಮಗುವಿಗೆ ಜನ್ಮ ನೀಡಿದ್ದಾಳೆ. ಪೊಲೀಸರು ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button