ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯದಲ್ಲಿ ಮೊದಲಬಾರಿಗೆ ಹುಬ್ಬಳ್ಳಿಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಗೆ ನೀಡಲಾಗಿದ್ದ ಪ್ಲಾಸ್ಮಾ ಥೆರಪಿ ಯಶಸ್ವಿಯಾಗಿದ್ದು, ಸೋಂಕಿತ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಮೂಲಕ ವೈದ್ಯಕೀಯ ಲೋಕದಲ್ಲಿ ಹೊಸ ಬೆಳಕು ಮೂಡಿದಂತಾಗಿದೆ.
ಕೊವೀಡ್ ಸೋಂಕಿತರ ಚಿಕಿತ್ಸೆಗೆ ರಾಮಬಾಣ ಎಂದೇ ಹೇಳಲಾಗುತ್ತಿದ್ದ ಪಾಸ್ಮಾ ಥೆರಪಿ ಚಿಕಿತ್ಸೆ ಪ್ರಯೋಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಮಾಡಲಾಗಿದ್ದು, ಮೊದಲಬಾರಿಗೆ ಯಶಸ್ವಿಯಾಗಿದೆ.
ಹುಬ್ಬಳ್ಳಿಯ ಕೋವಿಡ್ ನಿಂದ ಗುಣಮುಖರಾದ ವ್ಯಕ್ತಿಯ ಪ್ಲಾಸ್ಮಾ ಪಡೆದು ಮುಂಬೈನಿಂದ ರಾಜ್ಯಕ್ಕೆ ವಾಪಸ್ ಆಗಿದ್ದ 65 ವರ್ಷದ ಸೋಂಕಿತ ಪಿ-2710 ಪ್ಲಾಸ್ಮಾ ಥೆರಪಿ ಮಾಡಿ ವೈದ್ಯರ ತಂಡ ಯಶಸ್ಸು ಸಾಧಿಸಿದೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಹೇಳಿದ್ದಾರೆ.
ಕಿಮ್ಸ್ ನಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ನೀಡಲು ಐಸಿಎಂಆರ್ ಅನುಮತಿ ನೀಡಿದ್ದು, ರಾಜ್ಯದಲ್ಲಿ ಮೊದಲಿಗೆ ಹುಬ್ಬಳ್ಳಿಯ ವೈದ್ಯಕೀಯ ಶಿಕ್ಷಣ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಪ್ಲಾಸ್ಮಾ ಥೆರಪಿ ಚಿಕಿತ್ಸೆಗೆ ಕಿಮ್ಸ್ ವೈದ್ಯರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಕೋವಿಡ್ ಸೋಂಕಿನಿಂದ ಗುಣಮುಖರಾದ ರೋಗಿಗಳು ಪ್ಲಾಸ್ಮಾ ನೀಡಲು ಮೊದಲಿಗೆ ಹಿಂದೇಟು ಹಾಕುತ್ತಿದ್ದರು. ಆದರೆ ಕಿಮ್ಸ್ ಆಡಳಿತ ಮಂಡಳಿ ಗುಣಮುಖರಾದವರನ್ನು ಮನವೊಲಿಸಿ ಯಶಸ್ವಿ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಮಾಡಿದೆ.
ಕೊರೊನಾ ಸೋಂಕಿನಿಂದ ಗಂಭೀರವಾಗಿ ಬಳಲುತ್ತಿರುವ ರೋಗಿಗಳಿಗೆ ಮಾತ್ರ ಕೊರೊನಾದಿಂದ ಗುಣಮುಖರಾದ ರೋಗಿಯಿಂದ ಪ್ಲಾಸ್ಮಾ ಪಡೆದು ಈ ಚಿಕಿತ್ಸೆ ನೀಡಲಾಗುತ್ತದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ