ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಇಲ್ಲಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಾಂಬ್ ಇಟ್ಟಿರುವ ವದಂತಿ ಹಿನ್ನೆಲೆಯಲ್ಲಿ ಸಿಬ್ಬಂದಿ ಹಾಗೂ ಗ್ರಾಹಕರು ಕಂಗಾಲಾಗಿ ಹೊರಗೆ ಓಡಿ ಬಂದರು.
ಸೋಮವಾರ ಬೆಳಗ್ಗೆ ಈ ಘಟನೆ ನಡೆಯಿತು. ಅಪರಿಚಿತ ವ್ಯಕ್ತಿಯಿಂದ ಪೊಲೀಸ್ ಕಂಟ್ರೋಲ್ ರೂಂಗೆ ದೂರವಾಣಿ ಕರೆ ಬಂದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿದರು. ಬ್ಯಾಂಕ್ ನಲ್ಲಿದ್ದ ಗ್ರಾಹಕರು ಹಾಗೂ ಸಿಬ್ಬಂದಿಯಲ್ಲಿ ಭಯದ ವಾತಾವರಣ ಉಂಟಾಗಿ ಹೊರಗೆ ಓಡಿ ಬಂದರು.
ಬೆಳಗಾವಿಯಿಂದ ಬಾಂಬ್ ನಿಷ್ಕ್ರಿಯ ದಳ ಚಿಕ್ಕೋಡಿಗೆ ಆಗಮಿಸಿದ್ದು, ತಪಾಸಣೆ ಮುಂದುವರಿದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ