ಪ್ರಗತಿವಾಹಿನಿ ಸುದ್ದಿ, ತುಮಕೂರು
ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ, 111 ವರ್ಷದ ತುಮಕೂರಿನ ಸಿದ್ದಗಾಂಗಾ ಮಠದ ಶಿವಕುಮಾರ ಸ್ವಾಮಿಗಳು ಇನ್ನಿಲ್ಲ.
ಕಳೆದ ಹಲವಾರು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳು ಸೋಮವಾರ ಬೆಳಗ್ಗೆ 11.44ಕ್ಕೆ ನಿಧನರಾಗಿದ್ದಾರೆಂದು ಅಧಿಕೃತವಾಗಿ ಪ್ರಕಟಿಸಲಾಗಿದೆ.
ಮೈಸೂರಿನಿಂದ ಹೆಲಿಕಾಪ್ಟರ್ ಮೂಲಕ ಮಠಕ್ಕೆ ಆಗಮಿಸಿದ ಸಿಎಂ, ಮಠದಲ್ಲಿ ಉನ್ನತಮಟ್ಟದ ಸಭೆ ನಡೆಸಿದ ನಂತರ ಸ್ವಾಮಿಗಳ ನಿಧನದ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಲಾಯಿತು.
ಶ್ರೀಗಳ ಆರೋಗ್ಯ ಗಂಭೀರವಾಗಿರುವ ಸುದ್ದಿಯ ಹಿನ್ನೆಲೆಯಲ್ಲಿ ಸೋಮವಾರ ಬೆಳಗ್ಗೆಯಿಂದಲೇ ಮಠದತ್ತ ಭಕ್ತ ಸಾಗರ ಹರಿದುಬರುತ್ತಿದೆ. ತುಮಕೂರಿನಾದ್ಯಂತ ಪೊಲೀಸರೂ ಸಹ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
ಮಠದ ಆವರಣದಲ್ಲಿ ಸೇರಿರುವ ನೂರಾರು ಮಠಾಧೀಶರು, ಸಾವಿರಾರು ವಿದ್ಯಾರ್ಥಿಗಳು ಬೆಳಗ್ಗೆಯಿಂದಲೇ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ಶ್ರೀಗಳ ಪಾರ್ಥಿವ ಶರೀರ ದರ್ಶನಕ್ಕೆ ಲಕ್ಷಾಂತರ ಭಕ್ತರು, ಸಾವಿರಾರು ವಿವಿಐಪಿಗಳು ಆಗಮಿಸುವ ಸಾಧ್ಯತೆ ಇದೆ. ಇದಕ್ಕಾಗಿ ಈಗಾಗಲೆ ಸಿದ್ಧತೆ ನಡೆಸಲಾಗಿದೆ. ಬ್ಯಾರಿಕೇಡ್ ಗಳನ್ನು ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಪ್ರಧಾನಿ, ರಾಷ್ಟ್ರಪತಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ವಿವಿಐಪಿ ಗಳು ತುಮಕೂರಿಗೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ತುಮಕೂರಿನ ಸುತ್ತ ವಾರದ ಹಿಂದೆಯೇ 14 ಹೆಲಿಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗಿದೆ.
https://pragati.taskdun.com/latest/89-%e0%b2%b5%e0%b2%b0%e0%b3%8d%e0%b2%b7%e0%b2%a6%e0%b2%bf%e0%b2%82%e0%b2%a6-%e0%b2%b8%e0%b2%bf%e0%b2%a6%e0%b3%8d%e0%b2%a6%e0%b2%97%e0%b2%82%e0%b2%97%e0%b2%be-%e0%b2%ae%e0%b2%a0%e0%b2%a6-%e0%b2%86/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ