Latest

ಜೈಲು ಸಿಬ್ಬಂದಿ ಹಾಗೂ ಕೈದಿಗಳಿಗೂ ಹರಡಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಸೊಲ್ಲಾಪುರ: ಕೈದಿಗಳು ಸೇರಿದಂತೆ 60ಕ್ಕೂ ಹೆಚ್ಚು ಜೈಲು ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜೈಲಿನಲ್ಲಿ ನಡೆದಿದೆ.

ಜೈಲಿನಲ್ಲಿ ಒಟ್ಟು 300 ಮಂದಿ ಕೈದಿಗಳಿದ್ದಾರೆ. ಕೊರೊನಾ ತಗುಲಿದ 60 ಮಂದಿಯ ಪೈಕಿ 8 ಜನ ಜೈಲು ಸಿಬ್ಬಂದಿ ಇದ್ದಾರೆ. ಎಲ್ಲರನ್ನೂ ಸದ್ಯ ಐಸೋಲೇಷನ್ ಮಾಡಲಾಗಿದೆ ಎಂದು ಸೊಲ್ಲಾಪುರ ಜಿಲ್ಲಾಧಿಕಾರಿ ಮಿಲಿಂದ್ ಶಂಭಾರ್ಕರ್ ತಿಳಿಸಿದ್ದಾರೆ.

Home add -Advt

ಸೊಲ್ಲಾಪುರ ಜೈಲಿನ ಕೈದಿ ಮತ್ತು ಸಿಬ್ಬಂದಿಗೆ ಕೊರೊನಾ ಗುಣಲಕ್ಷಣಗಳು ಕಂಡು ಬಂದಿದ್ದವು. ಈ ಹಿನ್ನೆಲೆ ಅವರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.ಈ ವೇಳೆ ಮೇ 26ರಂದು ರಿಪೋರ್ಟ್ ಪಾಸಿಟಿವ್ ಬಂದಿತ್ತು. ತಕ್ಷಣವೇ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಗಂಟಲು ದ್ರವವನ್ನು ಪರೀಕ್ಷೆಗೆ ಒಳಪಡಿಸಿದಾಗ ಇದೀಗ ಒಂದೇ ದಿನ 60 ಮಂದಿಗೆ ಸೋಂಕು ದೃಢಪಟ್ಟಿದೆ.

ಈವರೆಗೂ ಸೊಲ್ಲಾಪುರ ಜಿಲ್ಲೆಯಲ್ಲಿ ಒಟ್ಟು 1,144 ಮಂದಿ ಸೋಂಕಿತರಿದ್ದು, 99 ಜನ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಈವರೆಗೂ 74 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢಪಟ್ಟಿದ್ದು, 32,329 ಜನ ಗುಣಮುಖರಾಗಿದ್ದಾರೆ. 2,587 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.

Related Articles

Back to top button