ಮಂಗಳವಾರ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ
ಪ್ರಗತಿವಾಹಿನಿ ಸುದ್ದಿ, ತುಮಕೂರು
ಸೋಮವಾರ ಮುಂಜಾನೆ ನಿಧನರಾದ ತುಮಕೂರಿನ ಶಿವಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ಮಂಗಳವಾರ ಬೆಳಗ್ಗೆ 3 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದ್ದಾರೆ.
ಶಿವಕುಮಾರ ಸ್ವಾಮಿಗಳು ಪವಾಡ ಪುರುಷರಾಗಿದ್ದರು, ಅವರ ಅಂತಿಮ ದರ್ಶನವನ್ನು ಶಾಂತವಾಗಿ ಪಡೆಯುವ ಮೂಲಕ ನಿಜವಾದ ಗೌರವನ್ನು ಅರ್ಪಿಸಬೇಕು ಎಂದು ಮುಖ್ಯಮಂತ್ರಿ ಹೇಳಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಈ ದೇಶ ಒಬ್ಬ ಮಹಾನ್ ವ್ಯಕ್ತಿಯನ್ನು ಕಳೆದುಕೊಂಡಿದೆ ಎಂದರು. 90 ವರ್ಷಗಳ ಕಾಲ ಅವರ ಸೇವೆಯನ್ನು ಬಣ್ಣಿಯಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಮಂಗಳವಾರ ಸರಕಾರಿ ರಜೆ
ಸಿದ್ದಗಂಗಾ ಶ್ರೀಗಳ ನಿಧನದ ಹಿನ್ನೆಲೆಯಲ್ಲಿ ಮಂಗಳವಾರ ಸರಕಾರಿ ರಜೆ ಘೋಷಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಿಸಿದರು. 3 ದಿನ ರಾಜ್ಯದಲ್ಲಿ ಶೋಕಾಚರಣೆ ಮಾಡಲಾಗುವುದು ಎಂದು ಅವರು ಹೇಳಿದರು.
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕು ಎಂದು ಉಪಮುಖ್ಯಮಂತ್ರಿ ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಒತ್ತಾಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ