ಪ್ರಗತಿವಾಹಿನಿ ಸುದ್ದಿ; ಕರಾಚಿ: ಪ್ರಪಂಚದಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ಭೂಗತ ಪಾತಕಿಯನ್ನೂ ಬಿಟ್ಟಿಲ್ಲ. ಹೌದು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಪತ್ನಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
ಪಾಕಿಸ್ತಾನದ ಕರಾಚಿಯಲ್ಲಿರುವ ದಾವೂದ್ ಇಬ್ರಾಹಿಂ ಹಾಗೂ ಆತನ ಪತ್ನಿ ಮಹಜಬೀನ್ ಗೆ ಕೊವಿಡ್-19 ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ದಾವೊದ್ ಮತ್ತು ಪತ್ನಿಯನ್ನು ಕರಾಚಿಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ದಾವೂದ್ ಗೆ ಸೋಂಕು ಖಚಿತವಾಗುತ್ತಿದ್ದಂತೆ ಆತನ ಸೆಕ್ಯೂರಿಟಿ ಗಾರ್ಡ್ ಮತ್ತು ಇತರೆ ಸಿಬ್ಬಂದಿ ಕ್ವಾರಂಟೈನ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ