ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ವಿಶ್ವ ಆರೋಗ್ಯ ಸಂಸ್ಥೆ ಕೂಡ ಶೀಘ್ರದಲ್ಲಿ ಭಾರತದಲ್ಲಿ ಸೋಂಕು ಸ್ಫೋಟಗೊಳ್ಳುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದೆ. ಇದರ ಬೆನ್ನಲ್ಲೇ ಇಂದು ಭಾರತ ಕೊರೊನಾ ಸೋಂಕಿನಲ್ಲಿ ಮತ್ತೊಂದು ಕೆಟ್ಟ ದಾಖಲೆ ಬರೆದಿದೆ.
ವಿಶ್ವದಲ್ಲಿ ಅತೀ ಹೆಚ್ಚು ಕೊರೊನಾ ಸೋಂಕಿತರಿರುವ ದೇಶಗಳ ಟಾಪ್ 10 ಪಟ್ಟಿಯಲ್ಲಿ ಭಾರತ 5ನೇ ಸ್ಥಾನಕ್ಕೆ ಏರಿದೆ. ಲಾಕ್ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ರಾಜಸ್ಥಾನ ಮತ್ತು ಗುಜರಾತ್ ನಲ್ಲಿ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ.
ಕೊರೊನಾ ಸೋಂಕಿತರಿರುವ ಟಾಪ್ 5 ದೇಶಗಳು
1. ಅಮೆರಿಕಾ – 18,97,239
2. ಬ್ರೆಜಿಲ್ – 6,14, 941
3. ರಷ್ಯಾ – 4.49.256
4. ಇಂಗ್ಲೆಂಡ್ – 2.84.734
5. ಸ್ಪೇನ್ – 2.40.978
6. ಭಾರತ – 2.36.531
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ