ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜೂನ್ 19ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಸಿದ್ದಾರೆ.
ವಿಧಾನಸಭಾ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯೂ ಆಗಿರುವ ವಿಶಾಲಾಕ್ಷಿ ಅವರಿಗೆ ಮಲ್ಲಿಕಾರ್ಜುನ ಖರ್ಗೆ ’ಕೈ’ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಖರ್ಗೆ ಅವರಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಜಿ.ಪರಮೇಶ್ವರ್,ಪ್ರಿಯಾಂಕ್ ಖರ್ಗೆ, ಯು,ಟಿ ಖಾದರ್ ಸೇರಿಸಂತೆ ಹಲವು ನಾಯಕರು ಸಾಥ್ ನೀಡಿದರು.
ರಾಜ್ಯಸಭೆಗೆ ಬಿಜೆಪಿಯಿಂದ ಇಬ್ಬರು, ಕಾಂಗ್ರೆಸ್ ಹಾಗೂ ಜೆಡಿಎಸ್ ನಿಂದ ತಲಾ ಒಬ್ಬರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿಯಿಂದ ಈರಣ್ಣ ಕಡಾಡಿ, ಅಶೋಕ್ ಗಸ್ತಿಗೆ ಟಿಕೆಟ್ ನೀಡಲಾಗಿದ್ದರೆ, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ