ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಲಾಕ್ ಡೌನ್ ಸಡಿಲಿಕೆಯಾದ ಬೆನ್ನಲ್ಲೇ ಜನರ ಓಡಾಟ ಜೋರಾಗಿದ್ದು, ಈ ನಡುವೆ ಎರಡು ಬೈಕ್‍ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ನಡೆದಿದೆ.
ತುರ್ಚಗಟ್ಟ ನಿವಾಸಿ ಸಿದ್ದೇಶ್ (30), 3 ವರ್ಷದ ಮಗ ಮೃತ ದುರ್ದೈವಿಗಳು. ತುರ್ಚಗಟ್ಟದಿಂದ ದಾವಣಗೆರೆಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರಗಡೆಯಿಂದ ಮತ್ತೊಂದು ಬೈಕ್‍ನಲ್ಲಿ ವೇಗವಾಗಿ ಬಂದ ಯುವಕರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಎರಡೂ ಬೈಕ್‍ಗಳು ನುಜ್ಜುಗುಜ್ಜಾಗಿದ್ದು, ಕೆಳಗೆ ಬಿದ್ದ ತಂದೆ-ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್‍ನಲ್ಲಿದ್ದ ಯುವಕರಿಗೂ ಗಂಭೀರವಾಗಿ ಗಾಯಗಳಾಗಿವೆ. ಹದಡಿ ಠಾಣೆಯ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಯುವಕರು ಅತಿ ವೇಗದಲ್ಲಿ ಬೈಕ್ ಓಡಿಸಿದ್ದೇ ಘಟನೆ ಕಾರಣ ಎನ್ನಲಾಗಿದೆ. ಹದಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ