Kannada NewsLatest

ಒಟ್ಟೂ ಸೋಂಕಿತರ ಸಂಖ್ಯೆ ಬೆಳಗಾವಿಯಲ್ಲಿ 302, ರಾಜ್ಯದಲ್ಲಿ 6041

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು ಹೊಸದಾಗಿ 120 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬೆಳಗಾವಿಯಲ್ಲಿ ಮಹಾರಾಷ್ಟ್ರದಿಂದ ಹಿಂತಿರುಗಿದ 61 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 302ಕ್ಕೇರಿದೆ.

ಇಂದು ಬೆಂಗಳೂರು ನಗರದಲ್ಲಿ 42, ಯಾದಗಿರಿಯಲ್ಲಿ 27, ಕಲಬುರಗಿಯಲ್ಲಿ 11 ಜನರಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 6041ಕ್ಕೇರಿದೆ.

ಇಂದು ಬೆಂಗಳೂರಿನಲ್ಲಿ ಇಬ್ಬರು ಹಾಗೂ ಧಾರವಾಡದಲ್ಲಿ ಒಬ್ಬರು ಕೊರೋನಾದಿಂದ ಸಾವಿಗೀಡಾಗಿದ್ದಾರೆ.

ಬೆಳಗಾವಿಯಲ್ಲಿ ಇಂದು ಒಟ್ಟೂ 38 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Home add -Advt

Related Articles

Back to top button