ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಜೆಎಂಎಫ್‍ಸಿ-2 ನ್ಯಾಯಾಲಯ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ.
ದೇಶದ್ರೋಹಿಗಳನ್ನು ನ್ಯಾಯಾಲಯ ಬಿಡುಗಡೆ ಮಾಡಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ, ಇದು ಪೊಲೀಸರ ನಿರ್ಲಕ್ಷ್ಯ. ಈ ಪ್ರಕರಣದಲ್ಲಿ ಎಫ್‍ಐಆರ್ ದಾಖಲಿಸುವುದರಿಂದ ಹಿಡಿದು ಚಾರ್ಜ್ ಶೀಟ್ ಸಲ್ಲಿಸುವವರೆಗೂ ಪೊಲೀಸರ ವೈಫಲ್ಯ ಎದ್ದುಕಾಣುತ್ತಿದ್ದು, ಕಾಶ್ಮೀರಿ ವಿದ್ಯಾರ್ಥಿಗಳನ್ನು ರಕ್ಷಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿ ಗ್ರಾಮೀಣ ಪೊಲೀಸರು ನಿಗದಿತ ಸಮಯದಲ್ಲಿ ಚಾರ್ಜ್ ಶೀಟ್ ಸಲ್ಲಿಸದೇ ಇರುವುದರಿಂದ ನ್ಯಾಯಾಲಯ ಆರೋಪಿಗಳಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ. 90 ದಿನದಲ್ಲಿ ಚಾರ್ಜ್ ಶೀಟ್ ದಾಖಲಿಸಬೇಕಾದ ಗ್ರಾಮೀಣ ಪೊಲೀಸರು 109 ದಿನಗಳ ನಂತರ ಚಾರ್ಜ್ ಶೀಟ್ ಸಲ್ಲಿಸಿರುವುದರಿಂದ ಆರೋಪಿಗಳು ಜಾಮೀನಿನ ಮೇಲೆ ಹೊರ ಬರುವಂತಾಯಿತು ಎಂದು ದೂರಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ