ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಹಿಳೆಯೊಬ್ಬಳ ಆರೋಗ್ಯದ ಚಿಕಿತ್ಸೆಗಾಗಿ ಮಾಡಲಾದ ಆಸ್ಪತ್ರೆಯ ವೆಚ್ಚಕ್ಕೆ ಪರಿಹಾರ ಧನ ಮಂಜೂರಾಗಿದ್ದು, ಶುಕ್ರವಾರ ಚೆಕ್ ವಿತರಿಸಲಾಯಿತು.
ಬಾಳೇಕುಂದ್ರಿ ಕೆ ಎಚ್ ಗ್ರಾಮದ ನಿವಾಸಿ ರೇಖಾ ಕೇದಾರಿ ಚಿನ್ವಾಲ್ ಇವರ ಆರೋಗ್ಯದ ಚಿಕಿತ್ಸೆಯ ವೆಚ್ಚವನ್ನು ಭರಿಸುವ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮುಖ್ಯಮಂತ್ರಿ ಪರಿಹಾರ ನಿಧಿಗೆ ಶಿಫಾರಸ್ಸು ಮಾಡಿದ್ದರು. ಅದರಂತೆ ಮಂಜೂರಾಗಿರುವ ಹಣದ ಚೆಕ್ ನ್ನು ಯುವ ಕಾಂಗ್ರೆಸ್ ಮುಖಂಡ ಚನ್ನರಾಜ ಹಟ್ಟಿಹೊಳಿ ಹಾಗೂ ಬುಡಾ ಮಾಜಿ ಅಧ್ಯಕ್ಷ ಯುವರಾಜ ಕದಂ ಹಸ್ತಾಂತರಿಸಿದರು.
ಗ್ರಾಮೀಣ ಕ್ಷೇತ್ರದಲ್ಲಿ ಅನಾರೋಗ್ಯಕ್ಕೀಡಾಗಿದ್ದ ನೂರಾರು ಜನರಿಗೆ ಈಗಾಗಲೆ ಆರ್ಥಿಕ ನೆರವು ಕೊಡಿಸಲಾಗಿದೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಮಂಜೂರಾಗದಿದ್ದರೂ ಲಕ್ಷ್ಮಿ ತಾಯಿ ಫೌಂಡೇಶನ್ ನಿಂದ ನೆರವು ನೀಡಲಾಗಿದೆ. ಕ್ಷೇತ್ರದ ಜನರ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಚನ್ನರಾಜ ಹಟ್ಟಿಹೊಳಿ ಈ ಸಂದರ್ಭದಲ್ಲಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ