Latest

ಗರ್ಭಿಣಿಯ ಮೇಲೆ ಅತ್ಯಾಚಾರಗೈದ ಸನ್ಯಾಸಿ

ಪ್ರಗತಿವಾಹಿನಿ ಸುದ್ದಿ; ಜೈಪುರ: ಜೈನ ಸನ್ಯಾಸಿಯೊಬ್ಬ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಘೋರ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ.

ಅತ್ಯಾಚಾರ ಆರೋಪದಡಿ ಜೈನ ಸನ್ಯಾಸಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿ ಮನೆಯಲ್ಲಿ ಪೆನ್ ಡ್ರೈವ್, ಕಾಂಡೋಮ್ ಪ್ಯಾಕೆಟ್ ಮತ್ತು ಎರಡು ಲ್ಯಾಪ್‍ಟಾಪ್, ಮೊಬೈಲ್ ಫೋನ್‍ಗಳು ಪತ್ತೆಯಾಗಿವೆ.

Related Articles

ಬಂಧಿತ ಆರೋಪಿಯನ್ನು 38 ವರ್ಷದ ಜೈನ ಸನ್ಯಾಸಿ ಸುಕುಮಾಲ್ ನಂದಿ ಎಂದು ಗುರುತಿಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು ಆರೋಪಿ ವಾಸಿಸುತ್ತಿದ್ದ ಸಮುದಾಯದ ಆಶ್ರಯ ಮನೆಯೊಂದರಲ್ಲಿ ದೊಡ್ಡ ಬ್ಯಾಗ್‍ನಲ್ಲಿ ಪತ್ತೆಯಾಗಿವೆ.

ಬಂಧಿತ ಆರೋಪಿ ವಿರುದ್ಧ ಸಾಕ್ಷ್ಯಗಳನ್ನು ಸಂಗ್ರಹಿಸಲು ವಿಧಿವಿಜ್ಞಾನ ಪ್ರಯೋಗಾಲಯ ತಂಡವನ್ನು ಕರೌಲಿಗೆ ನಿಯೋಜಿಸಲಾಗಿತ್ತು. ಈ ತಂಡವು ಶುಕ್ರವಾರ ಬೆಳಗ್ಗೆ ಆರೋಪಿ ಸನ್ಯಾಸಿ ವಾಸಿಸುತ್ತಿದ್ದ ಮನೆಗೆ ಹೋಗಿದೆ. ಅಲ್ಲಿ ತಪಾಸಣೆ ಮಾಡುವ ಸಂದರ್ಭದಲ್ಲಿ ದೊಡ್ಡ ಬ್ಯಾಗ್‍ಯೊಂದು ಪತ್ತೆಯಾಗಿದೆ.

ಬ್ಯಾಗ್ ನಲ್ಲಿ 19 ಮೊಬೈಲ್ ಫೋನ್, ಎರಡು ಲ್ಯಾಪ್‍ಟಾಪ್, ನಾಲ್ಕು ಹಾರ್ಡ್ ಡಿಸ್ಕ್, ಕಾಂಡೋಮ್ ಪ್ಯಾಕೆಟ್‍ಗಳು ಮತ್ತು 33 ಪೆನ್ ಡ್ರೈವ್‍ಗಳು ಪತ್ತೆಯಾಗಿದೆ. ತನಿಖಾ ಅಧಿಕಾರಿಗಳು ಹಾರ್ಡ್ ಡಿಸ್ಕ್ ಗಳನ್ನು ಸ್ಕ್ಯಾನ್ ಮಾಡಿದ್ದಾರೆ. ಅದರಲ್ಲಿ ಅನೇಕ ಅಶ್ಲೀಲ ವಿಡಿಯೋ ಇರುವುದು ಕಂಡುಬಂದಿದೆ.

ಸಂತ್ರಸ್ತೆ ಗರ್ಭಿಣಿ ತನ್ನ ಅತ್ತಿಗೆಯೊಂದಿಗೆ ಆಶೀರ್ವಾದ ಪಡೆಯಲು ಆರೋಪಿ ಸನ್ಯಾಸಿಯನ್ನು ಭೇಟಿ ಮಾಡಲು ಹೋಗಿದ್ದರು. ಈ ವೇಳೆ ಸಂತ್ರಸ್ತೆ ರೂಮಿಗೆ ಹೋಗಿದ್ದು, ಈ ವೇಳೆ ಆರೋಪಿ ನಂದಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ವಿಷಯ ಕುಟುಂಬದವರಿಗೆ ತಿಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಇನ್ಸ್‌ಪೆಕ್ಟರ್ ಲಕ್ಷ್ಮಣ್ ಗೌರ್ ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button