ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ತೀವ್ರ ಕುತೂಹಲ ಮೂಡಿಸಿದ್ದ ಬೆಳಗಾವಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಯುವರಾಜ ಕದಂ ಮತ್ತು ಉಪಾಧ್ಯಕ್ಷರಾಗಿ ಮಹಾದೇವಿ ಖಾನಗೌಡರ್ ಆಯ್ಕೆಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಈ ಆಯ್ಕೆ ನಡೆಯಿತು. ಹಿರಿಯ ಕಾಂಗ್ರೆಸ್ ನಾಯಕ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಬೆಂಬಲಿಗ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಯುವರಾಜ ಕದಂ ಆಯ್ಕೆಯಾದರು.
ನಾಮಪತ್ರ ಸಲ್ಲಿಸಿದ್ದ ಇತರರು ಹಿಂತೆಗೆದುಕೊಂಡಿದ್ದರಿಂದ ಅವಿರೋಧ ಆಯ್ಕೆ ನಡೆಯಿತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ