Latest

ರಾಜ್ಯ ಪ್ರವಾಸ ರದ್ದುಗೊಳಿಸಿದ ಸಿಎಂ; ಆನ್ ಲೈನ್ ಮೂಲಕವೇ ಕಾಮಗಾರಿಗೆ ಚಾಲನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಸಿಎಂ ಬಿ.ಎಸ್​​ ಯಡಿಯೂರಪ್ಪ ರಾಜ್ಯ ಪ್ರವಾಸ ರದ್ದು ಮಾಡಿದ್ದು, ಆನ್ ಲೈನ್ ಮೂಲಕವೇ ಕಾಮಗಾರಿಗಳಿಗೆ ಚಾಲನೆ ನೀಡಲು ನಿರ್ಧರಿಸಿದ್ದಾರೆ.

ಸಿಎಂ ಯಡಿಯೂರಪ್ಪ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಹಲವು ಕಾಮಗಾರಿಗಳಿಗೆ ಚಾಲನೆ ನೀಡಬೇಕಿತ್ತು. ಆದರೀಗ, ಕೊರೋನಾ ಭೀತಿಯಿಂದಾಗಿ ಬೆಂಗಳೂರಿನಿಂದಲೇ ಆನ್​​ಲೈನ್​​ ಮೂಲಕ ಕಾಮಗಾರಿಗಳಿಗೆ ಚಾಲನೆ ನೀಡಲು ಮುಂದಾಗಿದ್ದಾರೆ.

ಇಂದು ಬಿ.ಎಸ್​ ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಆನ್​ಲೈನ್​​​ ಮೂಲಕ ಭೂಮಿ‌ ಪೂಜೆ ನೆರವೇರಿಸಲಿದ್ಧಾರೆ. ರಾಜ್ಯದ ವಿವಿಧ ಭಾಗಗಳ ಕಾರ್ಯಕ್ರಮಗಳನ್ನೂ ಸಿಎಂ ಆನ್ ಲೈನ್ ಮೂಲಕವೇ ಪರಿಶೀಲನೆ ನಡೆಸಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button