ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿನ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ನಿನ್ನೆಯಿಂದ ನಾಪತ್ತೆಯಾಗಿದ್ದಾರೆ. ರಾಯಭಾರ ಕಚೇರಿ ನಾಪತ್ತೆಯಾಗಿರುವ ಕುರಿತು ಭಾರತಕ್ಕೆ ತಿಳಿಸಿದ್ದು, ಈ ಸಂಬಂಧ ಪಾಕಿಸ್ತಾನದ ವಿದೇಶಾಂಗ ಸಚಿವಾಲಯಕ್ಕೂ ಮಾಹಿತಿ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಪ್ರಸ್ತುತ ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಗೌರವ್ ಅಹ್ಲುವಾಲಿಯಾ ಅವರ ನಿವಾಸದ ಬಳಿ ಪಾಕ್ ಗುಪ್ತಚರ ಸಂಸ್ಥೆ ಐಎಸ್‍ಐ(ಇಂಟರ್ ಸರ್ವಿಸ್ ಇಂಟಲಿಜೆನ್ಸ್)ನವರು ಕಾವಲು ಕಾಯುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಇಬ್ಬರು ಭಾರತೀಯ ಅಧಿಕಾರಿಗಳ ನಾಪತ್ತೆ ಹಿಂದೆ ಪಾಕ್ ಗುಪ್ತಚರ ಇಲಾಖೆ ಕೈವಾಡವಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ