ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೋನಾ ವೈರಸ್ ಅಟ್ಟಹಾಸ ಮುಂದುವರಿದದೆ. ಒಂದೇ ದಿನ 2,224 ಹೊಸ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯೂ 41,182ಕ್ಕೆ ಏರಕೆಯಾಗಿದೆ.
ಈ ಕುರಿತು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಕೋವಿಡ್-19 ಸೋಂಕಿಗೆ ಬಲಿಯಾಗುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಸುಮಾರು 56 ಮಂದಿ ಸಾವನ್ನಪ್ಪಿದ್ಧಾರೆ. ಈ ಮೂಲಕ ಕೊರೋನಾಗೆ ದೆಹಲಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 1327ಕ್ಕೆ ಏರಿಕೆಯಾಗಿದೆ.
ಈ ನಡುವೆ ದೆಹಲಿಯಲ್ಲಿ ಹೆಚ್ಚುತ್ತಿರುವ ಕೊರೊನ ಸೋಂಕು ನಿಯಂತ್ರಣಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸರ್ವಪಕ್ಷಗಳ ಸಭೆ ಕರೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ