ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಮತ್ತು ನಾಳೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ಕರೆದಿದ್ದಾರೆ. ಇದು ದೇಶದಲ್ಲಿ ಕೊರೋನಾ ಸಂಕಷ್ಟ ಎದುರಾದ ಬಳಿಕ ಪ್ರಧಾನಿ ನರೇಂದ್ರ ಮೋದಿ 88 ದಿನಗಳಲ್ಲಿ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸುತ್ತಿರುವ 6ನೇ ಸಭೆಯಾಗಿದೆ.
ಇಂದು ಪಂಜಾಬ್, ಅಸ್ಸಾಂ, ಕೇರಳ, ಉತ್ತರಾಖಂಡ, ಜಾರ್ಖಂಡ್, ಛತ್ತೀಸ್ಘಡ, ತ್ರಿಪುರ, ಹಿಮಾಚಲ ಪ್ರದೇಶ, ಚಂಡೀಗಢ, ಗೋವಾ, ಮಣಿಪುರ, ನಾಗಾಲ್ಯಾಂಡ್, ಲಡಾಖ್, ಪುದುಚೇರಿ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ, ಸಿಕ್ಕಿಂ ಮತ್ತು ಲಕ್ಷದ್ವೀಪ ಸೇರಿ ಒಟ್ಟು 21 ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಚರ್ಚೆ ನಡೆಸಲಿದ್ದಾರೆ.
ನಾಳೆ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಆಂಧ್ರಪ್ರದೇಶ, ಹರಿಯಾಣ, ಜಮ್ಮು ಕಾಶ್ಮೀರ, ತೆಲಂಗಾಣ ಮತ್ತು ಒಡಿಶಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಲಿದ್ದಾರೆ.
ಈ ವೇಳೆ ಕೊರೋನಾ ಸ್ಥಿತಿಗತಿ ಬಗ್ಗೆ ರಾಜ್ಯಗಳಿಂದ ವರದಿ ಪಡೆಯವ, ಅನ್ಲಾಕ್ -1ನಿಂದ ಉಂಟಾದ ಪರಿಸ್ಥಿತಿ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ದೆಹಲಿಗಳಿಗೆ ವಿಭಿನ್ನ ಕಾರ್ಯಯೋಜನೆ ಬಗ್ಗೆ ಚರ್ಚೆ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ