ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು, ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಅವರಿಗೂ ಇಂದು ಕೋವಿಡ್ ಪಾಸಿಟಿವ್ ಬಂದಿರುವುದು ಅಧಿಕಾರಿಗಳಿಗೂ ಆತಂಕಕ್ಕೆ ಕಾರಣವಾಗಿದೆ.
ಸಚಿವ ಸಂತ್ಯೇಂದರ್ ಜೈನ್ ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಮಂಗಳವಾರ ಮುಂಜಾನೆ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ(ಆರ್‍ಜಿಎಸ್‍ಎಸ್‍ಹೆಚ್)ಗೆ ಕರೆತರಲಾಗಿತ್ತು. ಅಲ್ಲದೆ ನಿನ್ನೆ ಬೆಳಗ್ಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ವರದಿಯಲ್ಲಿ ಕೊರೊನಾ ನೆಗೆಟಿವ್ ಬಂದಿತ್ತು.
ಆದರೆ ಸಚಿವರಿಗೆ ಜ್ವರ ಕಡಿಮೆಯಾಗದ ಹಿನ್ನಲೆಯಲ್ಲಿ ಇಂದು ಮತ್ತೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂದು ಬಂದಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಸಚಿವರ ಆರೋಗ್ಯ ಸ್ಥಿರವಾಗಿದ್ದು, ಆಕ್ಸಿಜನ್ ಸಹಾಯ ನೀಡಲಾಗಿದೆ ಎಂದು ಎಂದು ವೈದ್ಯರು ಹೇಳಿದ್ದಾರೆ.
ಸತ್ಯೇಂದರ್ ಜೈನ್ ಅವರು ಕೇಂದ್ರ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಡಾ. ಹರ್ಷವರ್ಧನ್, ಅರವಿಂದ್ ಕೇಜ್ರಿವಾಲ್ ಹಾಗೂ ಮನೀಶ್ ಸಿಸೋಡಿಯಾರ ಸಭೆಯಲ್ಲಿ ಭಾಗಿಯಾಗಿದ್ದರು. ಇದೀಗ ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲರಲ್ಲೂ ಆತಂಕ ಮನೆ ಮಾಡಿದೆ.
ಈ ನಡುವೆ ದೆಹಲಿಯ ಎಎಪಿ ಶಾಸಕಿ ಅತಿಶಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಸದ್ಯ ಅವರನ್ನು ಹೋಂಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ