ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ದಿನೇ ದಿನೇ ಸಾವಿನ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಬೆಂಗಳೂರಿನಲ್ಲಿ ನಾಲ್ವರು ಗರ್ಭಿಣಿಯರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.
ಚಾಮರಾಜಪೇಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು 10 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿತ್ತು. ಇಂದು ವರದಿ ಬಂದಿದ್ದು, ನಾಲ್ವರು ಗರ್ಭಿಣಿಯರಿಗೂ ಕೊರೊನಾ ಪಾಸಿಟೀವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ.
ಈ ನಡುವೆ ಇಂದು ಕೊರೊನಾ ಸೋಂಕಿಗೆ ಬೆಂಗಳೂರಿನಲ್ಲಿ ಜೈನ್ ಟೆಂಪಲ್ ದೇವಾಲಯದ 55 ವರ್ಷದ ಅರ್ಚಕರೊಬ್ಬರು ಸಾವನ್ನಪ್ಪಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಬಂದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಗಂಟಲು ದ್ರವ ಹಾಗೂ ರಕ್ತ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ