ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲಾಕ್ ಡೌನ್ ನಿಂದ ಸಂಕಷ್ಟಕ್ಕೀಡಾಗಿ ತವರು ರಾಜ್ಯಗಳಿಗೆ ಮರಳಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ 6 ರಾಜ್ಯಗಳ 116 ಜಿಲ್ಲೆಗಳಲ್ಲಿ ಗರೀಬ್ ಕಲ್ಯಾಣ ರೋಜಗಾರ್ ಯೋಜನೆ ಜಾರಿಗೆ ಬರಲಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ, ಉತ್ತರ ಪ್ರದೇಶ, ಓಡಿಶಾ, ಮಧ್ಯಪ್ರದೇಶ, ರಾಜಸ್ಥಾನ, ಜಾರ್ಖಂಡ್ ನ 116 ಜಿಲ್ಲೆಗಳಲ್ಲಿ 12 ಇಲಾಖೆಗಳ ಸಮನ್ವಯದಲ್ಲಿ ವರ್ಷದ 125 ದಿನಗಳ ಕಾಲ ವಲಸೆ ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗುವುದು. ಜೂನ್ 20ರಂದು ಬಿಹಾರದ ಕಗಾರಿಯಾ ಜಿಲ್ಲೆಯಲ್ಲಿ ಈ ಯೋಜನೆಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ ಎಂದರು.
ಈ ರಾಜ್ಯಗಳ ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯವನ್ನು ಸೃಷ್ಟಿಸುವುದು ಹಾಗೂ ವಲಸಿಗ ಕಾರ್ಮಿಕರಿಗೆ 25 ರೀತಿಯ ಉದ್ಯೋಗಗಳನ್ನು ನೀಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಯೋಜನೆಗಾಗಿ 50 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ ಎಂದು ವಿವರಿಸಿದರು. ಆದರೆ ಗಮನಿಸಬೇಕಾದ ಅಂಶವೆಂದರೆ ಈ ಯೋಜನೆ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಯಾವುದೇ ರಾಜ್ಯಗಳಲ್ಲಿ ಜಾರಿಗೆ ಬರುತ್ತಿಲ್ಲ ಎಂಬುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ