ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಎಷ್ಟು ದರ ನಿಗದಿ ಮಾಡಬೇಕು ಎಂಬ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.
ಇಂದು ನಡೆದ ಕೊರೊನಾ ಟಾಸ್ಕ್ ಪೋರ್ಸ್ ಸಭೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳಿಗೆ ಹೆಚ್ಚಿನ ಚಿಕಿತ್ಸಾ ವೆಚ್ಚ ತೆಗೆದುಕೊಳ್ಳಲಾಗುತ್ತಿದೆ ಎಂಬ ಆರೊಪ ಕೇಳಿಬಂದಿರುವ ಬಗ್ಗೆ ಚರ್ಚೆ ನಡೆಸಲಾಯಿತು.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಖಾಸಗಿ ಆಸ್ಪತ್ರೆಲ್ಲಿ ಕೊರೋನಾ ರೋಗಿಯ ಚಿಕಿತ್ಸೆಗೆ ಇಂತಿಷ್ಟೇ ದರ ನಿಗದಿ ಆಗಬೇಕು ಎಂದು ಡಾಕ್ಟರ್ ಅಸೋಸಿಯೇಷನ್ ಮನವಿ ಮಾಡಿದೆ. ಇದಲ್ಲದೆ ಬೇರೆ ಬೇರೆ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಎಷ್ಟು ದರ ನಿಗದಿ ಮಾಡಲಾಗಿದೆ ಎಂಬುದರ ಬಗ್ಗೆಯೂ ಪರಿಶೀಲನೆ ನಡೆಸಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾವೆಚ್ಚ ದರ ನಿಗದಿ ಕುರಿತು ತಜ್ಞರ ಸಲಹೆಯನ್ನೂ ಪಡೆಯಲಾಗುವುದು. ಇದು ಕ್ಯಾಬಿನೆಟ್‌ನಲ್ಲಿ ಚರ್ಚೆಯಾಗಬೇಕಾದ ವಿಚಾರವಾಗಿದ್ದು, ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ಆನಂತರ ಖಾಸಗಿ ಆಸ್ಪತ್ರೆಗಳ ದರವನ್ನು ನಿರ್ಧರಿಸಲಾಗುವುದು ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ