ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭಾರತ-ಚೀನಾ ಗಡಿ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದ ವೇಳೆ ವಶಕ್ಕೆ ಪಡೆದುಕೊಂಡಿದ್ದ ಇಬ್ಬರು ಮೇಜರ್ ಸೇರಿದಂತೆ 10 ಮಂದಿ ಭಾರತೀಯ ಯೋಧರನ್ನು ಚೀನಾ ಬಿಡುಗಡೆ ಮಾಡಿದೆ.
ಮೂರು ದಿನಗಳ ಕಾಲ ಎರಡೂ ದೇಶಗಳ ನಡುವೆ ನಡೆದ ಮಾತುಕತೆಯ ಬಳಿಕ ಭಾರತದ 10 ಯೋಧರನ್ನು ಬಿಡುಗಡೆ ಮಾಡಲಾಗಿದೆ. ಮೇಜರ್ ಜನರಲ್ ಮಟ್ಟದಲ್ಲಿ ಮಾತುಕತೆ ನಡೆಸಲಾಗಿದ್ದು, ಕೆಲವು ಒಪ್ಪಂದಗಳಿಗೆ ಒಪ್ಪಿದ ಬಳಿಕ ಚೀನಾ ಸೇನಾಪಡೆ ಭಾರತೀಯ ಸೇನಾ ಸಿಬ್ಬಂದಿಯನ್ನು ಹಸ್ತಾಂತರಿಸಿದೆ.
ಗಡಿಯಲ್ಲಿ ನಡೆದ ಸಂಘರ್ಷದಲ್ಲಿ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿದ್ದ ಯೋಧರು ಇದೀಗ ಚೇತರಿಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಸಂಘರ್ಷದ ವೇಳೆ ಗಡಿಯಲ್ಲಿ ಭದ್ರತೆಗೆ ನಿಯೋಜನೆಗೊಂಡು, ಸಣ್ಣ ಪುಟ್ಟ ಗಾಯಗಳನ್ನು ಅನುಭವಿಸಿದ್ದ 58 ಮಂದಿ ಯೋಧರು ಇನ್ನೊಂದು ವಾರ ಅಥವಾ 10 ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಹಾಗೂ ಯಾವುದೇ ಯೋಧರೂ ನಾಪತ್ತೆಯಾಗಿಲ್ಲ ಎಂದು ಸೇನೆ ತನ್ನ ಹೇಳಿಕೆಯಲ್ಲಿ ಮಾಹಿತಿ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ