Latest

ನಿಯಂತ್ರಣಕ್ಕೆ ಬಾರದ ಕೊರೊನಾ; ಸಂಪೂರ್ಣ ಬಂದ್ ಆಗುತ್ತಾ ಜಿಂದಾಲ್?

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಜಿಂದಾಲ್ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೇ ರೀತಿ ಮುಂದುವರಿದರೆ ಇಡೀ ಕಂಪನಿ ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ ಇಲಾಖೆ ಖಾತೆ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಜಿಂದಾಲ್‍ನಲ್ಲಿ ಮಹಾಮಾರಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಈ ನಂಜು ನಿಯಂತ್ರಣಕ್ಕೆ ಬರದಿದ್ದರೆ ಜಿಂದಾಲ್ ಕಂಪನಿಯನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಈ ಕುರಿತು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ತುರ್ತು ಸಭೆ ಕರೆದಿದ್ದು, ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನ ಕೈಗೊಂಡಿದೆ. ಆದರೂ ಸಿಬ್ಬಂದಿಗಳಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ಹಿನ್ನೆಲೆ ಸೋಮವಾರ ತುರ್ತು ಸಭೆ ಕರೆಯಲಾಗಿದೆ. ಜಿಂದಾಲ್ ಮುಖ್ಯಸ್ಥ ವಿನೋದ್ ನಾವೆಲ್ ಅವರೂ ಸಭೆಗೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಇದೀ ದೇಶಾದ್ಯಂತ ಲಾಕ್ ಡೌನ್ ಇದ್ದಾಗಲೂ ಜಿಂದಾಲ್‍ ಕಂಪನಿ ತೆರೆದಿರಲು ಅವಕಾಶ ಕೊಡಲಾಗಿತ್ತು. ಇದರಿಂದ ಜನ ನಮ್ಮ ಮೇಲೆ ಅನುಮಾನ ವ್ಯಕ್ತಪಡಿಸುತ್ತಾರೆ. ಆದರೆ ಅಗತ್ಯ ಬಿದ್ದರೆ ಜಿಂದಾಲ್ ಸಂಪೂರ್ಣ ಬಂದ್ ಮಾಡಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button