ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 15,413 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
24 ಗಂಟೆಯಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢವಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4,10,461ಕ್ಕೆ ಏರಿಕೆ ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 306 ಜನರು ಸಾವನ್ನಪ್ಪಿದ್ದು, ಕೊರೊನಾಗೆ ಬಲಿಯಾದವರ ಸಂಖ್ಯೆ 13,254ಕ್ಕೆ ಏರಿಕೆಯಾಗಿದೆ. 4,10,461 ಪೈಕಿ 2,27,755 ಲಕ್ಷ ಜನರು ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ. ಇನ್ನೂ 1,69,451 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಈವರೆಗೂ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ದೆಹಲಿಯಲ್ಲಿ 56,746 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ