ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಆರೋಗ್ಯ ಸಚಿವ ಶ್ರೀರಾಮುಲು ಅವರ ಉಸ್ತುವಾರಿ ಜಿಲ್ಲೆ ಚಿತ್ರದುರ್ಗ ಜಿಲ್ಲೆಯಲ್ಲಿ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಲಭಿಸದ ಪರಿಸ್ಥಿತಿ ನಿರ್ಮಾಣವಾಗಿದೆ. ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಸಿಗದೇ ರೋಗಿಗಳು ಪರದಾಡುತ್ತಿದ್ದಾರೆ.
ಕಳೆದ ಆರು ತಿಂಗಳಿಂದ ಜಿಲ್ಲಾಸ್ಪತ್ರೆಗೆ ಸರಿಯಾಗಿ ಡಯಾಲಿಸಿಸ್ ಮಾಡಿಸಲು ಅಗತ್ಯವಿರುವ ಮೆಡಿಸಿನ್ ರವಾನೆಯಾಗುತ್ತಿಲ್ಲ. ಒಂದು ವಾರದಲ್ಲಿ ಮೂರು ಬಾರಿ ಡಯಾಲಿಸಿಸ್ ಅಗತ್ಯವಿರುವ ರೋಗಿಗಳಿಗೆ ಕೇವಲ ಎರಡು ದಿನ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ಡಯಾಲಿಸಿಸ್ ಚಿಕಿತ್ಸೆ ನಿಲ್ಲಿಸಲಾಗಿದೆ. ಪರಿಣಾಮ ಕಿಡ್ನಿ ವೈಫಲ್ಯ ಹಾಗೂ ಹೃದಯಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವ ಜಿಲ್ಲೆಯ ರೋಗಿಗಳು ಪರದಾಡುವಂತಾಗಿದೆ.
ಡಯಾಲಿಸಿಸ್ ನಿಲ್ಲಿಸಿರುವುದರ ಹಿಂದೆ ಸ್ಥಳೀಯ ಖಾಸಗಿ ಆಸ್ಪತ್ರೆಗಳ ಲಾಬಿ ಅಡಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಜಿಲ್ಲಾ ಸರ್ಜನ್ ಡಾ.ಬಸವರಾಜ್ ಅವರನ್ನ ಕೇಳಿದರೆ ನಮ್ಮಲ್ಲಿ ತಾತ್ಕಲಿಕವಾಗಿ ಇಲ್ಲಿಯತನಕ ಚಿಕಿತ್ಸೆ ನೀಡಿದ್ದು, ಈಗ ಸಮಸ್ಯೆ ಹೆಚ್ಚಾಗಿದೆ. ಆದಷ್ಟು ಬೇಗ ಜಿಲ್ಲಾಧಿಕಾರಿ ಗಮನಕ್ಕೆ ತರುತ್ತೇವೆ ಎಂದು ಹೇಳುತ್ತಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ