ಪ್ರಗತಿವಾಹಿನಿ ಸುದ್ದಿ; ಲಕ್ನೌ: ಆಶ್ರಯಧಾಮವೊಂದರಲ್ಲಿ 57 ಬಾಲಕಿಯರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇವರಲ್ಲಿ 7 ಬಾಲಕಿಯರು ಗರ್ಭಿಣಿಯರಾಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಬೆಳಕಿಗೆ ಬಂದಿದೆ.
ಸರ್ಕಾರಿ ಆಶ್ರಯಧಾಮದಲ್ಲಿ ಈ ಘಟನೆ ನಡೆದಿದ್ದು, ಇವರಲ್ಲಿ ಇಬ್ಬರು ಹೆಚ್ ಐವಿ ಸೋಂಕಿತರಾಗಿದ್ದಾರೆ. ಘಟನೆ ಬೆನ್ನಲ್ಲೇ ಎಚ್ಚೆತ್ತ ಯುಪಿ ಸರ್ಕಾರ, ಆಶ್ರಯಧಾಮಕ್ಕೆ ಬೀಗ ಜಡಿದಿದ್ದು, ಎಲ್ಲಾ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಿದೆ.
ಆಶ್ರಯಧಾಮದಲ್ಲಿ 7 ಬಾಲಕಿಯರು ಗರ್ಭಿಣಿಯರಾಗಿದ್ದು, ಇವರೆಲ್ಲರೂ ಆಶ್ರಯಧಾಮಕ್ಕೆ ಬರುವ ಮೊದಲೇ ಗರ್ಭಿಣಿಯರಾಗಿದ್ದರು, ಇವರಲ್ಲಿ 5 ಬಾಲಕಿಯರಲ್ಲಿ ಕೊರೊನಾ ಸೋಂಕು ತಗುಲಿದೆ ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಬ್ರಹ್ಮ ದಿಯೋ ರಾಮ್ ತಿವಾರಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ