Latest

ಹಿರಿಯ ಐಎಎಸ್ ಅಧಿಕಾರಿ ವಿಜಯಶಂಕರ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಹಿರಿಯ ಐಎಎಸ್ ಅಧಿಕಾರಿ ಬಿ.ಎಂ.ವಿಜಯಶಂಕರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ವಿಜಯಶಂಕರ ಐಎಂಎ ಹಗರಣದಲ್ಲಿ ಪ್ರಮುಖ ಆರೋಪಿಯಾಗಿದ್ದರು. 5 ಕೋಟಿ ರೂ. ಲಂಚ ಕೇಳಿದ್ದರು. ಒಂದೂವರೆ ಕೋಟಿ ರೂ ಪಡೆದಿದ್ದರು ಎನ್ನುವ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಿ, ಜೈಲಿಗೆ ಹಾಕಲಾಗಿತ್ತು. ಸೇವೆಯಿಂದ ಅಮಾನತುಗೊಂಡಿದ್ದರು. ಅವರ ಮನೆಯ ಮೇಲೆ ದಾಳಿ ನಡೆದಾಗ 2 ಕೋಟಿ ರೂ. ನಗದು ಸಿಕ್ಕಿತ್ತು.

ಈಗ ಪುನಃ ಅವರನ್ನು ವಶಕ್ಕೆ ಪಡೆಯಲು ಸಿಬಿಐ ಅನುಮತಿ ಕೇಳಿತ್ತು. ಐಎಂಎ ಹಗರಣದಲ್ಲಿ ಇವರು 18ನೇ ಆರೋಪಿಯಾಗಿದ್ದರು.

ಅವರು ಇಂದು ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಗರಣದಲ್ಲಿ ಇನ್ನೂ ಅನೇಕ ಅಧಿಕಾರಿಗಳು ಸಿಲುಕಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button