
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಲಸಂಪನ್ಮೂಲ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ ಜಾರಕಿಹೊಳಿ ಅವರು ಜೂನ್ ೨೭ ರಿಂದ ೩೦ ರವರಿಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂ.೨೭ ಶನಿವಾರ (ಶನಿವಾರ) ರಂದು ಬೆಳಗ್ಗೆ ೧೧ ಗಂಟೆಗೆ ಗೋಕಾಕ್ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಮಾಡಲಿದ್ದಾರೆ. ಜೂ.೨೮ (ರವಿವಾರ) ರಂದು ಬೆಳಗ್ಗೆ ೯ ಗಂಟೆಗೆ ಗೋಕಾಕ್ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ವಿಚಾರಣೆ ಮಾಡಲಿದ್ದಾರೆ.
ಜೂ.೨೯ (ಸೋಮವಾರ) ರಂದು ೧೦ ಗಂಟೆಗೆ ಬೆಳಗಾವಿ ನಗರದ ಸಮರ್ಥನಂ ಅಂಗವಿಕಲರ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣಾ ಕಾರ್ಯಕ್ರಮದಲ್ಲಿ ಸಚಿವರು ಭಾಗವಹಿಸಲಿದ್ದಾರೆ.
೧೧ ಗಂಟೆಗೆ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸ್ಮಾರ್ಟ್‌ಸಿಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ನಂತರ ಮಧ್ಯಾಹ್ನ ೧.೧೫ ಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆ ಸ್ಥಳ ಪರಿಶೀಲನೆ ನಡೆಸಿ, ಮಧ್ಯಾಹ್ನ ೨ ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಾಯಂಕಾಲ ೫ ಗಂಟೆಗೆ ಗೋಕಾಕ್‌ಗೆ ತೆರಳಲಿದ್ದಾರೆ.
ಜೂ.೩೦ (ಮಂಗಳವಾರ) ಗೋಕಾಕ್‌ನಿಂದ ರಾಮದುರ್ಗಕ್ಕೆ ತೆರಳಿ ೧೦ಕ್ಕೆ ರಾಮದುರ್ಗ ತಾಲೂಕು ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ