Latest

ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಅಂಬೇಡ್ಕರ್ ಟೆಕ್ನಿಕಲ್ ಕಾಲೇಜಿನ ಡೀನ್ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರಿನ ಮಲ್ಲತ್ತಹಳ್ಳಿಯಲ್ಲಿರುವ ಅಂಬೇಡ್ಕರ್ ತಾಂತ್ರಿಕ ಕಾಲೇಜಿನ ಡೀನ್ ಕಳೆದ ಕೆಲ ದಿನಗಳಿಮ್ದ ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು. ಅವರನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ 55 ವರ್ಷದ ಡೀನ್ ಸಾವನ್ನಪ್ಪಿದ್ದಾರೆ.

ಇನ್ನು ಕೊರೊನಾದಿಂದಾಗಿ ಡೀನ್ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಅವರ ಮೃತದೇಹವನ್ನು ಕುಟುಂಬದವರಿಗೆ ನೀಡದೇ ಕೊರೊನಾ ಮಾರ್ಗಸೂಚಿಯಂತೆಯೇ ಅಂತ್ಯಕ್ರಿಯೆ ಮಾಡಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಮೃತರ ಪತ್ನಿಗೂ ಕೊರೊನಾ ಪಾಸಿಟೀವ್ ಕಾಣಿಸಿಕೊಂಡಿದ್ದು, ಅವರನ್ನು ಬೆಂಗಳೂರಿನ ಇಎಸ್ ಐ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button