ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿದ ಬಳಿಕ ಅಂದರೆ ಜುಲೈ 4ರ ಬಳಿಕ ಗಟ್ಟಿ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೊರೊನಾ ನಿಯಂತ್ರಣ ನಿಟ್ಟಿನಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯ ನಿರ್ಧಾರಗಳನ್ನು ತಿಳಿಸಿದರು. ಎಸ್ ಎಸ್ ಎಲ್ ಸಿ ಪರೀಕ್ಷೆ ಮುಗಿಯುವುದನ್ನೇ ಕಾಯುತ್ತಿದ್ದೇವೆ, ಮುಗಿದ ಬಳಿಕ ಸೋಂಕು ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ ಕೆಲ ನಿಯಮಗಳು ಅನ್ವಯವಾಗಲಿದೆ ಎಂದರು.
ಜುಲೈ 5ರಿಂದ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಆಗಲಿದೆ. ಆಟೋ, ಟ್ಯಾಕ್ಸ್, ಕ್ಯಾಬ್, ಬಸ್ ಯಾವುದೇ ವಾಹನ ಸಂಚಾರ ಇರುವುದಿಲ್ಲ. ಅಲ್ಲದೇ ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನಮಾತ್ರ ಕೆಲಸವಿರಲಿದೆ. ನಾಳೆಯಿಂದ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ರಾಜ್ಯಾದ್ಯಂತ ಕರ್ಫ್ಯೂ ಜಾರಿಯಾಗಲಿದೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ