Kannada NewsKarnataka NewsLatest

ಅದಕ್ಕೆಲ್ಲ ಉತ್ತರಿಸಲು ನನ್ನಲ್ಲಿ ಸಮಯವಿಲ್ಲ: ಜಾರಕಿಹೊಳಿ ಹೇಳಿಕೆಗೆ ಲಕ್ಷ್ಮಿ ಹೆಬ್ಬಾಳಕರ್ ತಿರುಗೇಟು

 ರಮೇಶ್ ಜಾರಕಿಹೊಳಿ ಹೇಳಿಕೆಗೆ ತಿರುಗೇಟು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಅಂತಹ ಚೈಲ್ಡೀಶ್ ಹೇಳಿಕೆಗೆಲ್ಲ ಉತ್ತರಿಸಲು ನನ್ನಲ್ಲಿ ಸಮಯವಿಲ್ಲ. ನನಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ. ಪಕ್ಷ ಸಂಘಟನೆ ಮಾಡಿ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದೇನೆ ಎಂದು ಕಾಂಗ್ರೆಸ್ ನಾಯಕಿ, ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ.

ಬೆಳಗಾವಿ ಎಪಿಎಂಸಿಗೆ ಯುವರಾಜ ಕದಂ ಅವರನ್ನು ನಾನೇ ಅಧ್ಯಕ್ಷನನ್ನಾಗಿ ಮಾಡಿದ್ದೇನೆ ಎಂದು ಬೆಳಗ್ಗೆ ರಾಜ್ಯ ಜಲಸಂಪನ್ಮೂಲ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದರು. ಬಿಜೆಪಿಯಲ್ಲಿ ಒಬ್ಬರೇ ಸದಸ್ಯರಿದ್ದರು. ಹಾಗಾಗಿ ನಾನೇ ಕಾಂಗ್ರೆಸ್ ನ ಯುವರಾಜ ಕದಂ ಅವರನ್ನು ಅಧ್ಯಕ್ಷನನ್ನಾಗಿ ಮಾಡಿದ್ದೇನೆ ಎಂದು ಅವರು ಹೇಳಿದ್ದರು.

ಇಂದು ಬೆಳಗಾವಿಯಲ್ಲಿ ಪೆಟ್ರೋಲ್ ಬೆಲೆ ಏರಿಕೆ ನಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಲಕ್ಷ್ಮಿ ಹೆಬ್ಬಾಳಕರ್ ರಮೇಶ ಜಾರಕಿಹೊಳಿ ಹೇಳಿಕೆ ಕುರಿತು ಮಾಧ್ಯಮದವರು ಪ್ರತಿಕ್ರಿಯೆ ಕೇಳಿದಾಗ ಈ ರೀತಿ ಟಾಂಗ್ ನೀಡಿದರು.

ಎಪಿಎಂಸಿಗೆ ಯುವರಾಜ ಕದಂ ಅವರನ್ನು ಮುಂದಿನ ಬಾರಿ ಅಧ್ಯಕ್ಷನನ್ನಾಗಿಸೋಣ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಈ ಹಿಂದೆಯೇ ಹೇಳಿದ್ದರು. ಅದರಂತೆ ಅವರ ಸಹಕಾರದಿಂದ ಹಾಗೂ ಎಲ್ಲ ಸದಸ್ಯರ ಸಹಕಾರದಿಂದ ಯುವರಾಜ ಕದಂ ಅವರನ್ನು ಅಧ್ಯಕ್ಷನನ್ನಾಗಿಸಲಾಗಿದೆ. ಈ ಕುರಿತು  ಸತೀಶ್ ಜಾರಕಿಹೊಳಿ ಸರಿಯಾದ ಮಾಹಿತಿ ನೀಡಬಲ್ಲರು. ಯಾರೋ ಬಾಯಿಗೆ ಬಂದಂತೆ ಮಾತನಾಡಿದರೆ ಅದಕ್ಕೆಲ್ಲ ನಾನೇಕೆ ಉತ್ತರಿಸುತ್ತ ನನ್ನ ಸಮಯವನ್ನು ಹಾಳು ಮಾಡಿಕೊಳ್ಳಲಿ, ನನಗೆ ಪಕ್ಷ ಸಾಕಷ್ಟು ಜವಾಬ್ದಾರಿ ನೀಡಿದೆ. ಅದನ್ನು ನಿಭಾಯಿಸುವುದರಲ್ಲಿ ನಾನು ಬ್ಯೂಸಿಯಾಗಿದ್ದೇನೆ ಎಂದು ರಮೇಶ್ ಜಾರಕಿಹೊಳಿಗೆ ಕಿಚಾಯಿಸಿದರು.

ಇದಕ್ಕೂ ಮೊದಲು ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಪ್ರತಿಭಟನೆಯ ನೇತೃತ್ವ ವಹಿಸಿ, ಕೇಂದ್ರ ಸರಕಾರದ ಜನವಿರೋಧಿ ನೀತಿಯನ್ನು ಟೀಕಿಸಿದರು. ಕೇವಲ ಭಾಷಣ ಮಾಡುತ್ತ ಹೋದರೆ ಜನರ ಹೊಟ್ಟೆ ತುಂಬುವುದಿಲ್ಲ. ಪೆಟ್ರೋಲ್, ಗ್ಯಾಸ್ ಸೇರಿದಂತೆ ಎಲ್ಲ ವಸ್ತುಗಳ ಬೆಲೆಯೂ ಗಗನಕ್ಕೇರಿದೆ. ಆದರೆ ಕೇಂದ್ರ ಸರಕಾರಕ್ಕಾಗಲಿ, ರಾಜ್ಯಸರಕಾರಕ್ಕಾಗಲಿ ಜನರ ಹಿತ ಮುಖ್ಯವಲ್ಲ ಎಂದು ಟೀಕಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button