ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಇಂದು ಹಸೆಮಣೆಯೇರಬೇಕಿದ್ದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮದುಮಗನಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ವಿವಾಹವನ್ನು ಮುಂದೂಡಲಾಗಿದೆ.
ಇಂದು ವಿವಾಹಕ್ಕೆ ಸಿದ್ಧತೆ ನಡೆಸಿದ್ದ ಕಾನ್‌ಸ್ಟೇಬಲ್‌ಗೆ ಸೋಂಕು ಪತ್ತೆಯಾಗಿದ್ದು, ಹಸೆಮಣೆ ಏರಬೇಕಿದ್ದ ಮದುಮಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದು ನಡೆಯಬೇಕಿದ್ದ ಮದುವೆಯನ್ನು ಮುಂದೂಡಲಾಗಿದೆ.
ಕಾನ್‌ಸ್ಟೇಬಲ್ ಸಂಪರ್ಕಕ್ಕೆ ಬಂದವರು ಹಾಗೂ ಸಂಬಂಧಿಕರು, ಕುಟುಂಬದವರೆಲ್ಲರೂ ಕ್ವಾರಂಟೈನ್ ಆಗಿದ್ದಾರೆ.
26 ವರ್ಷದ ಪೊಲೀಸ್ ಕಾನ್‌ಸ್ಟೇಬಲ್‌ನಲ್ಲಿ ಕೊರೊನಾ ಪತ್ತೆಯಾಗಿದ್ದು, ಈ ಪೊಲೀಸ್ ಪೇದೆ ಬೆಂಗಳೂರಿನ ಕಮಿಷಿನರೇಟ್ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮದುವೆ ಹಿನ್ನೆಲೆಯಲ್ಲಿ ರಜೆ ಪಡೆದು ವಿಜಯಪುರಕ್ಕೆ ಬಂದಿದ್ದರು. ಆಗ ಆರೋಗ್ಯ ಇಲಾಖೆ ಸ್ವಾಬ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳಿಸಿತ್ತು. ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ಕಾರಣ ಮನೆಯವರನ್ನು ಮನವೊಲಿಸಿ ಮದುವೆ ಮುಂದೂಡಿಸಲಾಗಿದೆ ಎಂದು ಡಿಸಿ ವೈ.ಎಸ್.ಪಾಟೀಲ್ ತಿಳಿಸಿದ್ದಾರೆ.
ಸೋಂಕಿತ ಕಾನ್‌ಸ್ಟೇಬಲ್ ಸಂಪರ್ಕಕ್ಕೆ ಬಂದ 30 ಜನರ ಸ್ವ್ಯಾಬ್ ಕಲೆಕ್ಟ್ ಮಾಡಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಎಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ