Latest

ಮಾಸ್ಕ್, ಸಾಮಾಜಿಕ ಅಂತರ ಮರೆತ ಜಲಸಂಪನ್ಮೂಲ ಸಚಿವ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಕೊರೊನಾ ಅಂತಹ ದೊಡ್ಡ ರೋಗವೇ ಅಲ್ಲ, ಸಾಮಾಜಿಕ ಅಂತರ ಕಾಪಾಡಿಕೊಂಡು, ಮಾಸ್ಕ್ ಧರಿಸಿದರೆ ಸೋಂಕು ನಿಯಂತ್ರಣ ಮಾಡಬಹುದು ಎಂದು ಹೇಳುವ ಮೂಲಕ ಸ್ವತಃ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಸಾಮಾಜಿಕ ಅಂತರ ಮರೆತು, ಮಾಸ್ಕ್ ಧರಿಸದೇ ಭರ್ಜರಿ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು.

ರಾಯಚೂರಿನ ಮಸ್ಕಿಯ ಬುದ್ದಿನ್ನಿಯಲ್ಲಿ ನಡೆದ ನಂದವಾಡಗಿ ಏತನೀರಾವರಿ ಯೋಜನೆಯ ಹನಿ ನೀರಾವರಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮದ ಬಳಿಕ ವೇದಿಕೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಇಲ್ಲದೆ ಅವರ ಬೆಂಬಲಿಗರು ಸಚಿವರಿಗೆ ಸನ್ಮಾನ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿಯಾಗಲ್ಲ. ಎಷ್ಟೇ ಲಾಕ್‍ಡೌನ್ ಮಾಡಿದರೂ, ಜನರು ಸಹಕಾರ ನೀಡಿದಾಗ ಮಾತ್ರ ಕೊರೊನಾ ತಡೆಯಲು ಸಾಧ್ಯ. ಜನರು ಸ್ವಯಂ ಪ್ರೇರಿತರಾಗಿ ಸಾಮಾಜಿಕ ಅಂತರ ಕಾಪಾಡಬೇಕು. ಪ್ರಧಾನಿಯವರ ಮಾರ್ಗದರ್ಶನ ಹಾಗೂ ಸಿಎಂ ಯಡಿಯೂರಪ್ಪನವರ ಸೂಚನೆ ಪಾಲನೆ ಮಾಡಿದರೆ, ಅಲ್ಲದೆ ವೈದ್ಯರ ಸಲಹೆಗಳನ್ನು ಜನ ಪಾಲಿಸಿದರೆ ಕೊರೊನಾ ದೊಡ್ಡ ರೋಗ ಅಲ್ವೇ ಅಲ್ಲ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button