Latest

ಭಾರತ-ಚೀನಾ ಸಂಘರ್ಷ ಹಿನ್ನಲೆ; ಲಡಾಖ್ ಗೆ ದಿಢೀರ್ ಭೇಟಿ ನೀಡಿದ ಪ್ರಧಾನಿ ಮೋದಿ

ಪ್ರಗತಿವಾಹಿನಿ ಸುದ್ದಿ; ಲಡಾಕ್​: ಭಾರತ ಹಾಗೂ ಚೀನಾ ಗಡಿಯಲ್ಲಿ ಮತ್ತೆ ಉದ್ವಿಘ್ನ ಪರಿಸ್ಥಿತಿ ಉಂಟಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಮುಂಜಾನೆಯೇ ಗಡಿ ಭಾಗಕ್ಕೆ ದಿಢೀರ್​ ಭೇಟಿ ನೀಡಿದ್ದು, ಅಲ್ಲಿನ ಪರಿಸ್ಥಿತಿ ಪರಿಶೀಲಿಸಿದ್ದಾರೆ.

ಕಳೆದ ತಿಂಗಳು ಲಡಾಖ್ ನಲ್ಲಿ ಭಾರತ-ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಈ ವೇಳೆ ಭಾರತದ 20 ಸೈನಿಕರು ಹುತಾತ್ಮರಾಗಿದ್ದರು. ಭಾರತ ಕೂಡ ಚೀನಾಗೆ ತಿರುಗೇಟು ನೀಡಿದ್ದು, ಅವರ ದೇಶದ 40ಕ್ಕೂ ಹೆಚ್ಚು ಸೈನಿಕರನ್ನು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ. ಇದರಿಂದ ಎರಡೂ ದೇಶಗಳ ನಡುವೆ ಉದ್ವಿಘ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಗಡಿ ಭಾಗಕ್ಕೆ ಭೇಟಿ ನೀಡಿ, ಅಲ್ಲಿನ ಸೈನಿಕರ ಜೊತೆ ಮಾತುಕತೆ ನಡೆಸಿದ್ದಾರೆ.

ನಿಮು ಪ್ರದೇಶಕ್ಕೆ ಮೋದಿ ಇಂದು ಮುಂಜಾನೆಯೇ ತೆರಳಿದ್ದಾರೆ. ಸೇನೆ, ವಾಯುಸೇನೆ ಹಾಗೂ ಇಂಡೋ-ಟಿಬೇಟ್​ ಬಾರ್ಡರ್​ ಪೊಲೀಸರ ಜೊತೆ ಮೋದಿ ಸಂವಾದ ನಡೆಸಿದ್ದಾರೆ. ಈ ಮೂಲಕ ಅವರುಗಳಿಗೆ ನೈತಿಕ ಬೆಂಬಲ ನೀಡಿದ್ದಾರೆ. ಇನ್ನು, ಖುದ್ದು ಮೋದಿಯೇ ಗಡಿ ಭಾಗಕ್ಕೆ ತೆರಳಿರುವುದು ಸೈನಿಕರಿಗೆ ಹೊಸ ಹುರುಪು ನೀಡಿದೆ.

ಪ್ರಧಾನಿ ಮೋದಿ ಜೊತೆಗೆ ರಕ್ಷಣಾ ಮುಖ್ಯಸ್ಥ ಬಿಪಿನ್​ ರಾವತ್​ ಹಾಗೂ ಸೇನಾ ಮುಖ್ಯಸ್ಥ ಎಂಎಂ ನರವಣೆ ಕೂಡ ಭೇಟಿ ನೀಡಿದ್ದಾರೆ. ರಕ್ಷಣಾ ಸಚಿವ ರಾಜನಾಥ್‌‌ ಸಿಂಗ್‌ ಲಡಾಖ್‌ಗೆ ಭೇಟಿ ನೀಡಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಮುಂದೂಡಲಾಗಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button