Latest

ಒಂದೇ ದಿನದಲ್ಲಿ 24,850 ಕೊರೊನಾ ಪ್ರಕರಣಗಳು ದಾಖಲು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ರಣಕೇಕೆ ಹಾಕುತ್ತಿದೆ. ಇದೇ ಮೊದಲ ಬಾರಿಗೆ ದಿನವೊಂದರಲ್ಲಿ 24 ಸಾವಿರಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗಿವೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 24,850 ಪ್ರಕರಣಗಳು ಕಂಡುಬಂದಿದ್ದು, ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ. 613 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾಗೆ ಬಲಿಯಾದವರ ಸಂಖ್ಯೆ 19 ಸಾವಿರವನ್ನೂ ಮೀರಿದ್ದು, 19,268ಕ್ಕೆ ಏರಿಕೆಯಾಗಿದೆ.

Home add -Advt

ಈವರೆಗೆ ಕೊರೋನಾದಿಂದ ಗುಣಮುಖರಾದವರು4,09,083 ಜನ ಮಾತ್ರ. ದೇಶದಲ್ಲಿ ಇನ್ನೂ 2,44,814 ಜನರಲ್ಲಿ ಕೊರೋನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಜುಲೈ 1ರಂದು 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದವು.‌ ಜುಲೈ 4ರಂದು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದು 24 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಶನಿವಾರ 24,850 ಪ್ರಕರಣಗಳು ಕಂಡುಬಂದಿದ್ದು, ಇದರಿಂದ ದೇಶದ ಕೊರೋನಾ ಪೀಡಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ.

Related Articles

Back to top button