Latest

ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ ಐ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರು ಕೊರೋನಾ ಹಾಟ್ ಸ್ಫಾಟ್ ಆಗಿದ್ದು, ಕೊರೊನಾ ವಾರಿಯರ್ಸ್ ಸೋಂಕಿನಿಂದ ಸಾವನ್ನಪ್ಪುತ್ತಿದ್ದಾರೆ. ವಿಧಾನಸೌಧದಲ್ಲಿ ಭದ್ರತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್​ಐ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

57 ವರ್ಷದ ಎಸ್ ಐ, ಕೊರೊನಾ ಸೋಂಕು ಹಿನ್ನಲೆಯಲ್ಲಿ ಕಳೆದ ಮೂರು ದಿನಗಳ ಹಿಂದೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.

ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಇದುವರೆಗೂ 6 ಪೊಲೀಸರನ್ನು ಬಲಿ ಪಡೆದಿದೆ. ಕೊರೋನಾ ಸೋಂಕಿತರಿಂದಾಗಿ ಬೆಂಗಳೂರಿನ ಸುಮಾರು 40ಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ಸೀಲ್​ಡೌನ್ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button