Latest

ಉತ್ತರ ಕನ್ನಡದಲ್ಲಿ ಕೈ ಮೀರುತ್ತಿದೆ ಕೊರೋನಾ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ರಾಜ್ಯದಲ್ಲಿ ಇಂದು 1843 ಕೊರನಾ ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರಿನಲ್ಲಿ  981 ಜನರಿಗೆ ಸೋಂಕು ದೃಢಪಟ್ಟಿದೆ. ಬಳ್ಳಾರಿಯಲ್ಲಿ 99 ಹಾಗೂ ಉತ್ತರ ಕನ್ನಡದಲ್ಲಿ 81 ಜನರಿಗೆ ಸೋಂಕು ಪತ್ತೆಯಾಗಿದೆ.

ಇದರಿಂದಾಗಿ ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 25,317ಕ್ಕೇರಿದೆ. ಮೃತರ ಸಂಖ್ಯೆ 401.

ಉತ್ತರ ಕನ್ನಡದ ಶಿರಸಿಯಲ್ಲಿ ಇಂದು 42 ವರ್ಷದ ವ್ಯಕ್ತಿ ಸಾವಿಗೀಡಾಗಿದ್ದು, ಇದು ಜಿಲ್ಲೆಯ ಮೊದಲ ಸಾವು. ವ್ಯಕ್ತಿ ಬೆಂಗಳೂರಿನಿಂದ ಹಿಂದಿರುಗಿದ್ದು ನೇರವಾಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಇಂದು ಬೆಂಗಳೂರು ಗ್ರಾಮಾಂತರದಲ್ಲಿ 68, ಧಾರವಾಡ 56, ಕಲಬುರಗಿ 53, ಹಾಸನ 49, ಮೈಸೂರು 45, ಬೀದರ್ 44, ಉಡುಪಿ 40, ಮಂಡ್ಯ 39, ವಿಜಯಪುರ 36, ಯಾದಗಿರಿ 35, ದಕ್ಷಿಣ ಕನ್ನಡ 34, ಬಾಗಲಕೋಟೆ 33, ತುಮಕೂರು 31, ಶಿವಮೊಗ್ಗ 24, ಗದಗ 18, ಚಾಮರಾಜನಗರ 12, ರಾಮನಗರ 11, ಕೋಲಾರ 10, ಹಾವೇರಿ, ಕೊಪ್ಪಳ 9, ಚಿಕ್ಕಬಳ್ಳಾಪುರ 7, ರಾಯಚೂರು, ಚಿತ್ರದುರ್ಗ 6, ದಾವಣಗೆರೆ 3, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ತಲಾ 2 ಪ್ರಕರಣ ಇಂದು ದೃಢಪಟ್ಟಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button