ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದೆ. ಆಶಾಕಾರ್ಯಕರ್ತೆಯರು ತಮ್ಮ ಪ್ರಾಣದ ಹಂಗು ತೊರೆದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ಪಡುತ್ತಿರುವ ಅಡೆತಡೆಗಳು, ತೊಂದರೆಗಳು ಅಷ್ಟಿಷ್ಟಲ್ಲ. ಅವೆಲ್ಲವನ್ನೂ ಎದುರಿಸಿ ಕುಗ್ರಾಮಗಳಿಗೆ ಭೇಟಿ ನೀಡಿ ಕೆಲಸ ನಿರ್ವಹಿಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ನಕ್ಸಲ್ ಪೀಡಿತ ಗ್ರಾಮ ಸುಲ್ಕೇರಿಯ ಕೊರಗ ಕಾಲೋನಿಗೆ ಆಶಾ ಕಾರ್ಯಕರ್ತೆಯರು ತೆರಳುವಾಗ ಭಾರೀ ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿಯನ್ನು ಕಾಲುಸೇತುವೆ ಸಹಾಯದಿಂದ ದಾಟಿ ಗ್ರಾಮಕ್ಕೆ ಭೇಟಿ ನೀಡಿ ಸೇವೆ ಸಲ್ಲಿಸುತ್ತಿದ್ದಾರೆ.
ಇಲ್ಲಿನ ಕೊರಗ ಕಾಲೋನಿಯಲ್ಲಿ 40ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಕೆಲ ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳೂ ಕಾಣಿಸಿಕೊಂಡಿದೆ. ಮಳೆಯ ನಡುವೆ ರಭಸದಿಂದ ಹರಿಯುವ ನದಿಯನ್ನು ದಾಟಿ ಆಸ್ಪರೆಗಳಿಗೆ ಚಿಕಿತ್ಸೆಗೆ ಬರುವುದೂ ಕಷ್ಟ. ಹಾಗಾಗಿ ಆಶಾ ಕಾರ್ಯಕರ್ತೆಯರು ಪ್ರತಿದಿನ ಆ ಭಾಗಗಕ್ಕೆ ತೆರಳಿ ಚಿಕಿತ್ಸೆ ನೀಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತ ಫೋಟೋ ಭಾರೀ ವೈರಲ್ ಆಗಿದ್ದು, ಆಶಾ ಕಾರ್ಯಕರ್ತಯರ ನಿಸ್ವಾರ್ಥ ಸೇವೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ