Latest

ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಮಹಾರಾಷ್ಟ್ರಕ್ಕೆ ನಾಳೆ ರಾಜ್ಯದ ನಿಯೋಗ

 ಪ್ರಗತಿವಾಹಿನಿ ಸುದ್ದಿ, ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ನೇತೃತ್ವದ ರಾಜ್ಯ ಸರ್ಕಾರದ ನಿಯೋಗವು ಪ್ರವಾಹ ಹಾಗೂ ನೀರಾವರಿ ಯೋಜನೆಗಳ ಕುರಿತು ಮಹಾರಾಷ್ಟ್ರ ರಾಜ್ಯದ ನೀರಾವರಿ ಸಚಿವ ಜಯಂತ ಪಾಟೀಲ ಅವರನ್ನು ಭೇಟಿಯಾಗಿ ಚರ್ಚಿಸಲಿದೆ.
ಈ ನಿಯೋಗವು ದಿ. ೮ ರಂದು ಮುಂಜಾನೆ ೧೦ ಗಂಟೆಗೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ೧೧ ಗಂಟೆಗೆ ಬೆಳಗಾವಿ ಆಗಮಿಸಿ ಅಲ್ಲಿಂದ ೧೧.೩೦ ಗಂಟೆಗೆ ಬೆಳಗಾವಿಯಿಂದ ವಿಮಾನದ ಮೂಲಕ ಮುಂಬೈಗೆ ತೆರಳಿ ಮಹಾರಾಷ್ಟ್ರದ ನೀರಾವರಿ ಸಚಿವರೊಂದಿಗೆ ಪ್ರವಾಹದ ಮುಂಜಾಗೃತೆ ಕ್ರಮವಾಗಿ ಹಾಗೂ ನೀರಾವರಿ ಸಂಬಂಧಿಸಿದ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಅಲ್ಲಿಯೇ ವಾಸ್ತವ್ಯ ಮಾಡಲಿದೆ.

ದಿ. ೯ ರಂದು ಮುಂಜಾನೆ ೧೧.೩೦ ಗಂಟೆಗೆ ಮಹಾರಾಷ್ಟ್ರ ರಾಜ್ಯದ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಾಯಂಕಾಲ ೫ ಗಂಟೆಗೆ ಮುಂಬೈನಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿತಿಳಿಸಿದ್ದಾರೆ.

Related Articles

Back to top button