Kannada NewsKarnataka NewsLatest

ಗ್ರಾಮೀಣ ಕ್ಷೇತ್ರದಲ್ಲಿ ಮುಂದುವರಿದ ಅಭಿವೃದ್ಧಿ ಕಾಮಗಾರಿ

ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ  ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಮುಂದುವರಿದಿದ್ದು, ಕ್ಷೇತ್ರದ ಹಿಂಡಲಗಾ ಮತ್ತು ಶಾಹುನಗರಗಳಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.
 ಹಿಂಡಲಗಾ ಗ್ರಾಮದ ಮರಾಠಾ ಕಾಲೊನಿಯ ಜನರು ಬಹು ದಿನಗಳಿಂದ ಕಾಂಕ್ರಿಟ್ ರಸ್ತೆ ನಿರ್ಮಾಣದ ಬೇಡಿಕೆ ಇಟ್ಟಿದ್ದರು. ಚುನಾವಣೆಗೂ ಮುನ್ನ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರು. ಅದರಂತೆ ಸರಕಾರದಿಂದ ಮಂಜೂರು ಮಾಡಿಸಿಕೊಂಡು ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಿದರು.
 ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ ಸುಮಾರು 20 ಲಕ್ಷ ರೂ.ಗಳ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು, ನಗರದ ಮುಖಂಡರು, ಯುವಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಮೃಣಾಲ ಹೆಬ್ಬಾಳಕರ್, ಕಾರ್ಯಕರ್ತರು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಶಾಹುನಗರದಲ್ಲಿ

ಕ್ಷೇತ್ರದ ಶಾಹು ನಗರ ಮರಾಠಾ ಕಾಲೊನಿಯಲ್ಲಿ ಸಹ ಕಾಂಕ್ರೀಟ್ ರಸ್ತೆಯ ನಿರ್ಮಾಣದ ಕಾಮಗಾರಿಗೆ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ವತಿಯಿಂದ 20 ಲಕ್ಷ ರೂ ವೆಚ್ಚದಲ್ಲಿ ಅಧಿಕೃತವಾಗಿ ಚಾಲನೆಯನ್ನು ನೀಡಲಾಯಿತು.
ಸ್ಥಳೀಯ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರದ ಜನರಿಗೆ ನೀಡಿರುವ ಎಲ್ಲ ಭರವಸೆಗಳನ್ನೂ ಹಂತಹಂತವಾಗಿ ಈಡೇರಿಸುತ್ತ ಬಂದಿದ್ದೇನೆ. ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ಮುಂದುವರಿಯಲಿವೆ. ನಿಮ್ಮ ಸಹಕಾರ ಹೀಗೆಯೇ ಇರಲಿ ಎಂದು ವಿನಂತಿಸಿದ ಹೆಬ್ಬಾಳಕರ್, ಸಮಯ ಮಿತಿಯಲ್ಲಿ ಉತ್ತಮ ರಸ್ತೆ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. 
ಲಕ್ಷ್ಮಿ ಹೆಬ್ಬಾಳಕರ್ ಕೊರೋನಾ ಸಂದರ್ಭದಲ್ಲಿ ಮತ್ತು ಇಂತಹ ಮಳೆಯಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ಮುಂದುವರಿಸುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರಶಂಸೆ ವ್ಯಕ್ತವಾಗುತ್ತಿದೆ. ಅಭಿವೃದ್ಧಿಯ ನೆಪ ಹೇಳಿ ಪಕ್ಷಾಂತರ ಮಾಡುವ ಶಾಸಕರು ಇವರನ್ನು ನೋಡಿ ಕಲಿಯಲಿ ಎಂದು ಅನೇಕರು ಸಲಹೆ ನೀಡುತ್ತಿದ್ದಾರೆ. 
ಇಂತಹ ಮಳೆಯಲ್ಲೂ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸುತ್ತಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್  ಕಾರ್ಯ ನಿಜವಾಗಿಯೂ ಅವರ ಸಾಮಾಜಿಕ ಕಳಕಳಿ ಮತ್ತು ಜನರ ಬಗೆಗಿನ ಕಾಳಜಿಯನ್ನು ತೋರಿಸುತ್ತದೆ. ಅವರಿಗೆ ನಮ್ಮ ಅನಂತ ಧನ್ಯವಾದಗಳು.
– ಆರ್. ಮಲ್ಲಿಕಾರ್ಜುನ ಚೆಟ್ಟಿ, ನಿವೃತ್ತ ಹಿರಿಯ ಅಧಿಕಾರಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button