
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 24,879 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ 7,67,296ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 487 ಜನ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 21 ಸಾವಿರ ದಾಟಿದೆ. ದೇಶದಲ್ಲಿ ಈವರೆಗೆ ಕೊರೋನಾದಿಂದ ಬಲಿಯಾದವರ ಸಂಖ್ಯೆ 21,129ಕ್ಕೆ ಏರಿಕೆಯಾಗಿದೆ.
ಈವರೆಗೆ ಕೊರೋನಾದಿಂದ ಗುಣ ಆದವರು 4,76,378 ಜನ ಮಾತ್ರ. ದೇಶದಲ್ಲಿ ಇನ್ನೂ 2,69,789 ಜನರಲ್ಲಿ ಕೊರೊನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.
ದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ 24 ಸಾವಿರಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಇದೀಗ ಅತಿ ಹೆಚ್ಚು ಸೋಂಕು ಪೀಡಿತ ರಾಷ್ಟ್ರಗಳಲ್ಲಿ ಭಾರತ 3ನೇ ಸ್ಥಾನದಲ್ಲಿದೆ.