ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ಪ್ರಶಸ್ತಿ ಘೋಷಿಸದಿರುವುದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ರಾಜ್ಯದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ.
ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ, ಸಂಗೀತ ಮಾಂತ್ರಿಕ ಭೂಪೇನ್ ಹಜಾರಿಕಾ, ಜೆಪಿ ಅವರ ಸಂಗಾತಿ ಆಗಿದ್ದ, ಗ್ರಾಮ ಸ್ವರಾಜ್ಯಕ್ಕೆ ತಮ್ಮನ್ನು ಅರ್ಪಿಸಿದ್ದ ನಾನಾಜಿ ದೇಶ್‌ಮುಖ್ ಅವರಿಗೆ ಶುಕ್ರವಾರ ದೇಶದ ಅತ್ಯುತ್ತಮ ನಾಗರೀಕ ಗೌರವವಾದ ಭಾರತ ರತ್ನ ಗೌರವ ಘೋಷಿಸಲಾಗಿದೆ. ಆದರೆ ಬಹುದಿನಗಳಿಂದ ರಾಜ್ಯದಲ್ಲಿ ಭಾರೀ ಜನಾಗ್ರಹ ಕೇಳಿ ಬರುತ್ತಿದ್ದ ಸಿದ್ದಗಂಗಾ ಶ್ರೀಗಳ ಹೆಸರು ಇಲ್ಲದಿರುವುದು ಅಸಮಾಧಾನ ಮೂಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಭಾರತರತ್ನ ಪ್ರಶಸ್ತಿ ಪಡೆದಿರುವ ಎಲ್ಲರನ್ನೂ ಅಭಿನಂದಿಸುತ್ತೇನೆ. ಆದರೆ, ಸಿದ್ದಗಂಗಾ ಶ್ರೀಗಳ ಹೆಸರು ಸೇರಿಸದಿರುವುದು ಬೇಸರ ತರಿಸಿದೆ ಎಂದಿದ್ದಾರೆ. ರಾಜ್ಯದ ಸಾವಿರಾರು ಜನ ಈ ಸಂಬಂಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಮದೇವ ಬಾಬಾ ಸೇರಿದಂತೆ ಹಲವು ಗಣ್ಯರು ಶ್ರೀಗಳ ನಿಧನದ ಸಂದರ್ಭದಲ್ಲೂ, ಸಿದ್ದಗಂಗಾ ಶ್ರೀಗಳಿಗೆ ಭಾರತರತ್ನ ನೀಡುವಂತೆ ಪ್ರಧಾನಿಗಳನ್ನು ಆಗ್ರಹಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ